LATEST NEWS
ಉಡುಪಿ ಜಿಲ್ಲೆಯಲ್ಲಿ ಎಡಬಿಡದೇ ಸುರಿಯುತ್ತಿರುವ ಭಾರಿ ಮಳೆ ನಾಳೆ (ಜುಲೈ 24)ರಂದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ
ಉಡುಪಿ ಜಿಲ್ಲೆಯಲ್ಲಿ ಎಡಬಿಡದೇ ಸುರಿಯುತ್ತಿರುವ ಭಾರಿ ಮಳೆ ನಾಳೆ (ಜುಲೈ 24)ರಂದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ
ಉಡುಪಿ ಜುಲೈ 23: ಉಡುಪಿ ಜಿಲ್ಲೆಯಲ್ಲಿ ಕಳೆದ 5 ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಇಂದು ಕೂಡ ಮುಂದುವರೆದಿದೆ. ನಾಳೆ ಕೂಡ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನಲೆ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೋರ್ಲಪಾಟಿ ಆದೇಶಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಕಳೆದ 24 ಗಂಟೆಯ ಅವಧಿಯಲ್ಲಿ ಒಟ್ಟು 135 ಮಿಲಿಮೀಟರ್ ಸರಾಸರಿ ಮಳೆ ದಾಖಲಾಗಿದೆ. ಕುಂದಾಪುರದಲ್ಲಿ ಅತೀ ಹೆಚ್ಚು ದಾಖಲಾಗಿದ್ದು, 155 ಮಿಲಿಮೀಟರ್ ಮಳೆ ಸುರಿದಿದೆ. ಇನ್ನು ಉಡುಪಿಯಲ್ಲಿ 130, ಕಾರ್ಕಳದಲ್ಲಿ 90 ಮಿಲಿಮೀಟರ್ ಮಳೆಯಾಗಿದೆ ಎಂದು ಉಡುಪಿ ಹವಾಮಾನ ಇಲಾಖೆ ತಿಳಿಸಿದೆ.
ನಾಳೆ ಕೂಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಈ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ.
ಈವರೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು. ಭಾರೀ ಗಾಳಿ, ಮಳೆ ಹಾಗೂ ಪೋಷಕರ ಒತ್ತಡದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ತಕ್ಷಣ ಮೌಖಿಕ ರಜೆ ಘೋಷಿಸಿದ್ದಾರೆ. ಅಲ್ಲದೆ ನದಿ ಪಾತ್ರದ ಜನ ಎಚ್ಚರಿಕೆಯಿಂದ ಇರುವಂತೆ ಹಾಗೂ ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಕಳೆದ ಕೆಲವು ದಿನಗಳಿಂದ ನಿರಂತರಂತರವಾಗಿ ಮಳೆ ಸುರಿಯುತ್ತಿರುವುದರಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಕಾಲುವೆ ಸಮೀಪದ ಮನೆಗಳಲ್ಲಿ ನೀರು ತುಂಬಿಕೊಂಡಿದೆ. ಕಲ್ಸಂಕ, ಅಂಬಾಗಿಲು ವ್ಯಾಪ್ತಿಯಲ್ಲಿ ಕೃತಕ ನೆರೆ ಸಂಭವಿಸಿದೆ. ಭಾರೀ ಮಳೆಯಿಂದ ಕಾಲುವೆಗಳು ಉಕ್ಕಿ ಹರಿಯುತ್ತಿದ್ದು, ರಸ್ತೆಗಳಲ್ಲಿಯೂ ನೀರು ತುಂಬಿಕೊಂಡಿದೆ. ಹೀಗಾಗಿ ವಾಹನ ಸವಾರರು ಹಾಗೂ ಪಾದಚಾರಿಗಳು ರಸ್ತೆಯಲ್ಲಿ ಕಷ್ಟಪಟ್ಟು ಸಂಚರಿಸುತ್ತಿದ್ದಾರೆ.