Connect with us

    LATEST NEWS

    ಚುನಾವಣೆ ನಡೆಯುವ ಸ್ಥಳಗಳಲ್ಲಿ 31ರಂದು ಸಾರ್ವತ್ರಿಕ ರಜೆ

    ಚುನಾವಣೆ ನಡೆಯುವ ಸ್ಥಳಗಳಲ್ಲಿ 31ರಂದು ಸಾರ್ವತ್ರಿಕ ರಜೆ

    ಮಂಗಳೂರು ಆಗಸ್ಟ್ 30 ;- ಆಗಸ್ಟ್ 31ರಂದು ಶುಕ್ರವಾರದಂದು ರಾಜ್ಯದ 21 ಜಿಲ್ಲೆಗಳ 102 ನಗರ ಸ್ಥಳೀಯ ಸಂಸ್ಥೆಗಳು ಹಾಗೂ 3 ಮಹಾನಗರ ಪಾಲಿಕೆಗಳಿಗೆ ಚುನಾವಣೆಯು ನಡೆಯಲಿರುತ್ತದೆ.

    ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಪುತ್ತೂರು ನಗರಸಭೆ ಹಾಗೂ ಬಂಟ್ವಾಳ ಪುರಸಭೆಗೆ ಚುನಾವಣೆ ನಡೆಯಲಿದ್ದು, ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ, ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳನ್ನು ಒಳಗೊಂಡಂತೆ ಆಗಸ್ಟ್ 31ರಂದು ಸಾರ್ವತ್ರಿಕ ರಜೆಯನ್ನು ಘೋಷಿಸಿದೆ.

    ಈ ರಜೆಯು ತುರ್ತು ಸೇವೆಗಳಿಗೆ ಹಾಗೂ ಚುನಾವಣಾ ಕರ್ತವ್ಯದ ಸಿಬ್ಬಂದಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

    ಬಲಗೈ ಹೆಬ್ಬರಳಿಗೆ ಶಾಯಿ: ಚುನಾವಣೆ ದಿವಸ ಮತದಾರರಿಗೆ ಅಳಿಸಲಾಗದ ಶಾಯಿಯನ್ನು ಬಲಗೈ ಹೆಬ್ಬರಳಿಗೆ ಹಚ್ಚಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply