Connect with us

DAKSHINA KANNADA

ಸರಣಿ ರಜೆ ಜಿಲ್ಲೆಯ ಪ್ರಸಿದ್ದ ದೇವಸ್ಥಾನಗಳಲ್ಲಿ ಜನಸಂದಣಿ

ಸರಣಿ ರಜೆ ಜಿಲ್ಲೆಯ ಪ್ರಸಿದ್ದ ದೇವಸ್ಥಾನಗಳಲ್ಲಿ ಜನಸಂದಣಿ

ಸುಬ್ರಹ್ಮಣ್ಯ ಡಿಸೆಂಬರ್ 25: ಸರಣಿ ಸರ್ಕಾರಿ ರಜೆ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಪ್ರಸಿದ್ದ ದೇವಸ್ಥಾನಗಳಲ್ಲಿ ಇಂದು ಜನಜಂಗುಳಿ ಕಂಡುವ ಬಂದಿದೆ. ಧರ್ಮಸ್ಥಳ, ಸುಬ್ರಹ್ಮಣ್ಯ ಸೇರಿದಂತೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ.

ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಕೂಡ ಭಕ್ತರ ಸಂಖ್ಯೆ ಹೆಚ್ಚಾಗಿದೆ.ಶನಿವಾರದಿಂದಲೇ ಭಕ್ತರ ದಂಡು ಕ್ಷೇತ್ರದತ್ತ ಹರಿದು ಬರ್ತಾ ಇದ್ದು, ಲಕ್ಷಾಂತರ ಭಕ್ತರು ದೇಶದ ನಾನಾ ಕಡೆಗಳಿಂದ ಆಗಮಿಸುತ್ತಿದ್ದಾರೆ. ಸುಬ್ರಹ್ಮಣ್ಯ ನ ಆಲಯ ತುಂಬಾ ಭಕ್ತರಿಂದ ತುಂಬಿದ್ದು, ಇವತ್ತೇ ಒಂದು ದಿನ ಲಕ್ಷಕ್ಕಿಂತ ಹೆಚ್ಚು ಭಕ್ತರು ದೇವರ ದರ್ಶನ ಪಡೆದಿದ್ದಾರೆ.

ಜನಸಂದಣಿ ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಭಕ್ತರಿಗೆ ತೊಂದರೆಯಾಗದಂತೆ ಸಕಲ ಕ್ರಮ ಕೈಗೊಂಡಿದ್ದು,ಸುಬ್ರಹ್ಮಣ್ಯ ನ ಸೇವೆಗಳನ್ನು ಯಥಾಸ್ಥಿತಿಯಲ್ಲಿಯೇ ಮಾಡಲಾಗುತ್ತಿದೆ..ಇನ್ನು ದೇವಳದ ಆದಾಯದಲ್ಲೂ ಗಣನೀಯ ಏರಿಕೆಯಾಗುವ ಸಾಧ್ಯತೆಯಿದ್ದು,ಜನವರಿ ಆರಂಭದವರೆಗೂ ಜನಸಂದಣಿಯಿರುವ ಸಾಧ್ಯತೆಗಳಿವೆ.

 

VIDEO

Share Information
Continue Reading
Advertisement
Click to comment

Leave a Reply

Your email address will not be published. Required fields are marked *