KARNATAKA
ಜನವರಿ ನಡೆಯಲಿರುವ ಪ್ರತಿಭಟನೆ ಸಮಾವೇಶ ಮುಂದೂಡಲು ಗೃಹ ಸಚಿವರ ಮನವಿ
ಜನವರಿ ನಡೆಯಲಿರುವ ಪ್ರತಿಭಟನೆ ಸಮಾವೇಶ ಮುಂದೂಡಲು ಗೃಹ ಸಚಿವರ ಮನವಿ
ಮಂಗಳೂರು ಡಿಸೆಂಬರ್ 31: ಡಿಸೆಂಬರ್ 19ರಂದು ನಡೆದ ಗಲಭೆ ಮತ್ತು ಗೋಲಿಬಾರ್ ನಂತರ ಉಂಟಾಗಿರುವ ಸಂಘರ್ಷದ ವಾತಾವರಣವನ್ನು ತಿಳಿಗೊಳಿಸಿ, ಶಾಂತಿ ಸ್ಥಾಪಿಸುವ ಸಂಬಂಧ ಗೃಹ ಸಚಿವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಉನ್ನತ ಮಟ್ಟದ ಶಾಂತಿ ಸುವ್ಯವಸ್ಥೆ ಸಭೆ ನಡೆಸಿದರು.
ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಾನೂನು ಸುವ್ಯವಸ್ಥೆ ಶಾಂತಿ ಸಭೆ ಮಾಡಿದ್ದೇವೆ. ವಿವಿಧ ಸಂಘಟನೆ ಪ್ರಮುಖರು ಸೇರಿದಂತೆ ಅಧಿಕಾರಿಗಳ ಮಾಹಿತಿ ಪಡೆದುಕೊಂಡಿದ್ದೆವೆ. ಡಿಸೆಂಬರ್ 19 ರ ಗಲಭೆಯ ನಂತರ ಎಲ್ಲರ ಸಹಕಾರ ಸಿಕ್ಕಿದ್ದು , ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಕ್ರಮಕೈಗೊಳ್ಳಲಾಗಿದೆ. ದ.ಕ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಉಳಿಯಲು ಚಿಂತನೆ ಮಾಡಿದ್ದು, ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಮುಸ್ಲಿಂ ಸೆಂಟ್ರಲ್ ಕಮಿಟಿ ಜನವರಿ 4ರಂದು ಹಮ್ಮಿಕೊಂಡಿರುವ ಪ್ರತಿಭಟನೆ ಮತ್ತು ಜನವರಿ 12ರಂದು ಬಿಜೆಪಿ ವತಿಯಿಂದ ನಡೆಸಲು ಉದ್ದೇಶಿಸಿರುವ ಜನಜಾಗೃತಿ ಸಮಾವೇಶವನ್ನು ಮುಂದೂಡುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.
ಗೋಲಿಬಾರ್ ಬಗ್ಗೆ ನ್ಯಾಯ ಸಮ್ಮತವಾದ ತನಿಖೆ ನಡೆಸಲಾಗುತ್ತಿದ್ದು, ತನಿಖೆ ಶೀಘ್ರವಾಗಿ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ತನಿಖೆಯಲ್ಲಿ ಯಾವುದೇ ಅಮಾಯಕರಿಗೆ ತೊಂದರೆಯಾಗಬಾರದು. ಹಿಂಸೆಯಲ್ಲಿ ತೊಡಗಿದವರ ಮೇಲೆ ಬಿಗಿ ಕ್ರಮ ಕೈಗೊಳ್ಳುತ್ತೇವೆ ಎಂದರು.
ಗೋಲಿಬಾರ್‌ನಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೀಡಿದ್ದ ಪರಿಹಾರವನ್ನು ರದ್ದು ಮಾಡಿಲ್ಲ, ತಡೆ ಹಿಡಿಯಲಾಗಿದೆ. ತನಿಖಾ ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.