Connect with us

KARNATAKA

‘ಶರಣಾದ್ರೆ ಸಾಮಾನ್ಯ ಬದುಕಿಗೆ ಅವಕಾಶ, ಬಂದೂಕು ಹಿಡಿದು ದಾಳಿಗೆ ಮುಂದಾದ್ರೆ ಎನ್‌ಕೌಂಟರ್,’ನಕ್ಸಲರಿಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ರಿಂದ ಎಚ್ಚರಿಕೆ ರವಾನೆ

ಬೆಂಗಳೂರು : ಶರಣಾದ್ರೆ ಸಾಮಾನ್ಯ ಬದುಕಿಗೆ ಸರ್ಕಾರ ಅವಕಾಶ ಮಾಡಿಕೊಡಲಿದೆ, ಬಂದೂಕು ಹಿಡಿದು ದಾಳಿಗೆ ಮುಂದಾದ್ರೆ ಎನ್‌ಕೌಂಟರ್ ಅನಿವಾರ್ಯ ಎಂದು ನಕ್ಸಲರಿಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಎಚ್ಚರಿಕೆ ರವಾನಿಸಿದ್ದಾರೆ.

ಉಡುಪಿ  ಹೆಬ್ರಿ ಸಮೀಪದ ಕಬ್ಬಿನಾಲೆಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಎನ್​ಕೌಂಟರ್​​ನಲ್ಲಿ ಹತ್ಯೆ ಮಾಡಿರುವ ಬಗ್ಗೆ ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ವಿಕ್ರಮ್ ಗೌಡ ಎಂಬ ಗ್ರೇಡೆಡ್ ನಕ್ಸಲ್‌ನನ್ನು ನಕ್ಸಲ್ ನಿಗ್ರಹ ಪಡೆ ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ. ಕಳೆದ 20 ವರ್ಷಗಳಿಂದ ಆತನನ್ನು ಪೊಲೀಸರು ಹುಡುಕುತ್ತಿದ್ದರು. ಆತ ತಪ್ಪಿಸಿಕೊಂಡು ಓಡಾಡುತ್ತಿದ್ದ. ಈ ಹಿಂದೆ ನಡೆದ ಅನೇಕ ಎನ್‌ಕೌಂಟರ್​ಗಳಲ್ಲಿ ವಿಕ್ರಂ ಗೌಡ ತಪ್ಪಿಸಿಕೊಂಡಿದ್ದ. ನಿನ್ನೆ ಸಂಜೆ ವಿಕ್ರಂ ಗೌಡ ಎನ್‌ಕೌಂಟರ್ ಆಗಿದೆ. ಆತನ ಚಲನವಲನಗಳನ್ನು ಪೊಲೀಸರು ಸೂಕ್ಷ್ಮಾವಾಗಿ ಗಮನಿಸುತ್ತಿದ್ದರು. ಸೋಮವಾರ ರಾತ್ರಿ ಖಚಿತ ಮಾಹಿತಿ‌ ಮೇರೆಗೆ ಕಾರ್ಯಾಚರಣೆ ಮಾಡಿದ್ದಾರೆ. ಆತ ಆತ ಪೊಲೀಸರ ಮೇಲೆ ಗುಂಡಿನ ದಾಳಿ ಮಾಡಿದ್ದ. ಪೊಲೀಸರು ಪ್ರತಿ ದಾಳಿ ನಡೆಸಿದ್ದಾರೆ. ಆತನ ಜತೆಯಲ್ಲಿದ್ದ ಇಬ್ಬರು ಮೂವರು ಓಡಿ ಹೋಗಿದ್ದಾರೆ. ಆ ಭಾಗದಲ್ಲಿ ಕೂಂಬಿಂಗ್ ಮುಂದುವರೆದಿದೆ ಎಂದಿದ್ದಾರೆ. ರಾಜ್ಯದಲ್ಲಿ ನಕ್ಸಲ್ ಕಾಲ ಮುಗಿಯಿತು ಅಂದುಕೊಂಡಿದ್ದೆವು. ಆದರೆ ಕಳೆದ ವಾರ ರಾಜು ಮತ್ತು ಲತಾ ಎಂಬ ನಕ್ಸಲರು ಪತ್ತೆ ಆದರು. ನಂತರ ಅವರಿಬ್ಬರೂ ತಪ್ಪಿಸಿಕೊಂಡು ಹೋದರೆಂದು ಕೂಂಬಿಂಗ್ ಆಪರೇಷನ್ ನಡೆಸಲಾಯ್ತು. ಕಳೆದ ಒಂದು ವಾರದಿಂದ ಕೂಂಬಿಂಗ್ ನಡೆಯುತ್ತಿತ್ತು. ಆಗ ಇದ್ದಕಿದ್ದಂತೆ  ವಿಕ್ರಂ ಗೌಡ ಬರುವ ಮಾಹಿತಿ ಸಿಕ್ಕಿತ್ತು. ಆತನ ಎನ್‌ಕೌಂಟರ್ ಮಾಡುವುದು ಆ ಸಂದರ್ಭದಲ್ಲಿ ಪೊಲೀಸರಿಗೆ ಅನಿವಾರ್ಯವಾಯಿತು ಎಂದು ಹೇಳಿದ್ದಾರೆ. ನಕ್ಸಲರನ್ನು ಮುಖ್ಯ ವೇದಿಕೆಗೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ. ಹಿಂದೆ ಪಾವಗಡ ಭಾಗದಲ್ಲಿ ನಕ್ಸಲರನ್ನು ಮಾತನಾಡಿ ಮುಖ್ಯವೇದಿಕೆಗೆ ಕರೆತರಲಾಗಿತ್ತು. ಈಗಲೂ ಈ ಪ್ರಯತ್ನ ನಡೆಯುತ್ತಿದೆ. ಶರಣಾಗಲು ಬಯಸುವ ನಕ್ಸಲರಿಗೆ ಸಾಮಾನ್ಯ ಬದುಕು ನಡೆಸಲು ಸರ್ಕಾರ ಅವಕಾಶ ಮಾಡಿಕೊಡಲಿದೆ, ಪರಮೇಶ್ವರ್ ಹೇಳಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *