Connect with us

LATEST NEWS

ಬಾಂಬ್ ಬ್ಲಾಸ್ಟ್ ನಲ್ಲಿ ಗಾಯಗೊಂಡಿದ್ದ ಆಟೋಚಾಲಕನಿಗೆ ಗೃಹಸಚಿವರಿಂದ ಹಣಕಾಸಿನ ನೆರವು…!!

ಮಂಗಳೂರು ನವೆಂಬರ್ 23:ಕುಕ್ಕರ್ ಬಾಂಬ್ ಸ್ಪೋಟ ಸಂದರ್ಭ ಗಾಯಗೊಂಡಿದ್ದ ಆಟೋ ಚಾಲಕನನ್ನು ಇಂದು ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ ಯಾಗಿ ಆರೋಗ್ಯ ವಿಚಾರಿಸಿದ್ದು, ಈ ವೇಳೆ ವೈಯುಕ್ತಿಕವಾಗಿ 50 ಸಾವಿರ ಧನ ಸಹಾಯ ಮಾಡಿದ್ದಾರೆ.

ಆಟೋ ರಿಕ್ಷಾದಲ್ಲಿ ಬಾಂಬ್ ಸ್ಪೋಟ ನಡೆದ ಸ್ಥಳಕ್ಕೆ ಪೊಲೀಸ್ ಆಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಗೃಹ ಸಚಿವರು ಬಳಿಕ ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟೋಚಾಲಕನನ್ನು ಬೇಟಿ ಮಾಡಿ ಚಿಕಿತ್ಸೆ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ವೇಳೆ ಗೃಹ ಸಚಿವರು ವೈಯಕ್ತಿಕವಾಗಿ 50 ಸಾವಿರ ರೂ. ಧನಸಹಾಯ ನೀಡಿದರು. ಅಲ್ಲದೇ ಚಿಕಿತ್ಸೆಯ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲಾಗುವುದು ಎಂದು ಭರವಸೆ ನೀಡಿದರು.

Advertisement
Click to comment

You must be logged in to post a comment Login

Leave a Reply