LATEST NEWS
ಕೇಂದ್ರ ಸಚಿವ ಭಗವಂತ ಖೂಬಾ ಜನಾಶೀರ್ವಾದ ಯಾತ್ರೆ ವೇಳೆ ಗಾಳಿಯಲ್ಲಿ ಗುಂಡು ಹಾರಾಟ ತಪ್ಪು – ಗೃಹ ಸಚಿವ ಆರಗ ಜ್ಞಾನೇಂದ್ರ
ಮಂಗಳೂರು ಅಗಸ್ಟ್ 20: ಕೇಂದ್ರ ಸಚಿವ ಭಗವಂತ ಖೂಬಾ ಜನಾಶೀರ್ವಾದ ಯಾತ್ರೆಯ ವೇಳೆ ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದು ತಪ್ಪು, ಹೆಚ್ಚು ಕಡಿಮೆಯಾಗಿದ್ದರೆ ಪ್ರಾಣಾಪಾಯ ಉಂಟಾಗುವ ಸಾಧ್ಯತೆ ಇತ್ತು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಎಫ್ಐಆರ್ ದಾಖಲಿಸಲಾಗಿದೆ. ಮಲೆನಾಡು, ಕೊಡಗು ಭಾಗದಲ್ಲಿ ಕೆಲವು ಕಡೆಗಳಲ್ಲಿ ಸಂತೋಷಕ್ಕಾಗಿ, ವಿಜಯೋತ್ಸವ ಸಂದರ್ಭ ಗಾಳಿಯಲ್ಲಿ ಫಯರ್ ಮಾಡುವ ಸಂಪ್ರದಾಯ ಇದೆ. ಇಂತಹ ಸಂಪ್ರದಾಯಗಳು ಖಂಡಿತವಾಗಿಯೂ ತಪ್ಪು ಎಂದರು.
ಕರಾವಳಿಯಲ್ಲಿ ಬಹಳ ವರ್ಷಗಳಿಂದ ಭಯೋತ್ಪಾದಕರ ವಿವಿಧ ಚಟುವಟಿಕೆಯಲ್ಲಿ ನಡೆಯುತ್ತಿದೆ. ಈ ಕುರಿತು ತೀವ್ರ ನಿಗಾವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಸರ್ಕಾರವೂ ಈ ವಿಚಾರ ಗಂಭೀರವಾಗಿ ಪರಿಗಣಿಸಲಿದೆ. ಎನ್ಐಎ ಕಚೇರಿ ಆರಂಭಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಭೇಟಿ ನೀಡಿದ್ದ ವೇಳೆ ಕರಾವಳಿಯ ಶಾಸಕರು, ಸಚಿವರು ಮನವಿ ಸಲ್ಲಿಸಿದ್ದಾರೆ. ಕೇಂದ್ರ ಸರ್ಕಾರದೊಂದಿಗೆ ಮಾತನಾಡಿ ಈ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.