Connect with us

BANTWAL

ಹೊನಲುಬೆಳಕಿನ ಕ್ರೀಡೋತ್ಸವ ಕಾರ್ಯಕ್ರಮ ನನ್ನ ಜೀವನದ ಅವಿಸ್ಮರಣೀಯ ಕ್ಷಣ: ಮಾಜಿ ಸಿಎಂ ಕುಮಾರಸ್ವಾಮಿ

ಬಂಟ್ವಾಳ, ಡಿಸೆಂಬರ್ 10:  ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ ಹೊನಲುಬೆಳಕಿನ ಕ್ರೀಡೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾಜಿ ಸಿಎಂ ಕುಮಾರಸ್ವಾಮಿ ಭಾಗವಹಿಸಿ ಮಾತನಾಡಿದ್ದಾರೆ.

ಸಭೆಯನ್ನುದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ಹಿಂದೆ ಪ್ರಭಾಕರ್ ಭಟ್ ಅವರ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ, ಈ ಕಾರ್ಯಕ್ರಮ ನನ್ನ ಜೀವನದ ಅವಿಸ್ಮರಣೀಯ ಕ್ಷಣ,ಇಲ್ಲಿ ಅತ್ಯುತ್ತಮ ಶಿಕ್ಷಣ ಕೊಡಲಾಗುತ್ತಿದೆ. ಈ‌ ಕಾರ್ಯಕ್ರಮ ಅಷ್ಟು ಸುಲಭವಾಗಿ ಮಾಡಲು ಸಾಧ್ಯವಿಲ್ಲ, ಗುರುಕುಲ ಪರಂಪರೆಯನ್ನು ಸಂಸ್ಕೃತಿಗಳನ್ನು ನೀಡಲಾಗುತ್ತಿದೆ.

ಉತ್ತಮ ಶಿಸ್ತಿನ ಬದಕನ್ನು ಕಲಿಸಲಾಗುತ್ತಿದೆ, ಮಾನವೀಯತೆ ವಿಕಸನವನ್ನು ಇಲ್ಲಿ ನೀಡಲಾಗುತ್ತದೆ. ಈ‌ ಕಾರ್ಯಕ್ರಮಕ್ಕೆ ಬಾರದೇ ಇದ್ರೆ ಜೀವನದ ದೊಡ್ಡ ನಷ್ಟವಾಗುತ್ತಿತ್ತು, ಗ್ರಾಮೀಣ ಪ್ರದೇಶದ ಕಲೆಗಳನ್ನು ಮಕ್ಕಳಲ್ಲಿ ಮಾಡಿಸಿದ್ದಾರೆ, ಚಂದ್ರಯಾನ ಉಡಾವಣೆಯನ್ನು ಕಣ್ಣಿಗೆ ಕಟ್ಟುವ ಹಾಗೆ ತೋರಿಸಿದ್ದೀರಿ, ಬಾಲ್ಯದಲ್ಲಿ ರಾಮನ ಭಜನೆ ಮಾಡಿದನ್ನು ಇವತ್ತು ಮತ್ತೆ ನೆನಪಿಸಿದ್ದೀರಿ, ಪ್ರಭಾಕರ್ ಭಟ್ ಬದುಕಿನ ಒಳ್ಳೆಯ ನಡವಳಿಕೆ ಕಲಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಕಣ್ಣು ತೆರೆಸುತ್ತಿದ್ದೀರಿ ಎಂದರು.

ಕುಮಾರಸ್ವಾಮಿ ಹಿಂದೆ ಒಂದು ರೀತಿ ಮಾತನಾಡುತ್ತಿದ್ದರು, ಈಗ ಕಾರ್ಯಕ್ರಮ ಭಾಗವಹಿಸುತ್ತಿದ್ದೀರಿ ಅಂತಾ ನೀವು ಯೋಚಿಸಿರಬಹುದು. ನನನ್ನು ಕೆಲವರು ದಾರಿ ತಪ್ಪಿಸುವ ಮಾಹಿತಿ ನೀಡಿದ್ದರು. ಇವತ್ತು ನನ್ನ ಕಣ್ಣು ತೆರೆದಿದೆ, ನನ್ನಲ್ಲಿ ತಪ್ಪುಗಳಾಗಿದೆ, ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎನ್ನುತ್ತಾ  ಭಾಷಣದ ಕೊನೆಗೆ ಕುಮಾರ ಸ್ವಾಮಿ ಜೈ ಶೀರಾಮ್ ಘೋಷಣೆ ಕೂಗಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *