DAKSHINA KANNADA
ಹನಿ ಹಿಂದೆ ಹೋಗಿ ಟ್ರ್ಯಾಪ್ ಆದ ಯುವಕ ಕಳೆದುಕೊಂಡಿದ್ದು 30 ಲಕ್ಷ
ಪುತ್ತೂರು: ಯುವತಿಯೊಬ್ಬಳ ಮೋಹಕ್ಕೆ ಬಲಿಯಾಗಿ ಹನಿಟ್ರ್ಯಾಪ್ ಆಗಿ ಲಕ್ಷಾಂತರ ಹಣ ಕಳೆದುಕೊಂಡ ಯುವಕನೊಬ್ಬ 7 ಮಂದಿ ವಿರುದ್ದ ಪೊಲೀಸರಿಗೆ ದೂರು ನೀಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ.
ನೆಟ್ಟಣಿಗೆ ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಅಬ್ದುಲ್ ನಾಸೀರ್ (25) ಹನಿಟ್ರ್ಯಾಪ್ ಗೆ ಬಲಿಯಾಗಿ 30 ಲಕ್ಷ ಕಳೆದುಕೊಂಡ ಯುವಕ.
ಈ ಘಟನೆ ಎಪ್ರಿಲ್ 12 ರಂದು ನಡೆದಿದ್ದು ಇದೀಗ ಪೊಲೀಸ್ ಮೇಲಾಧಿಕಾರಿಗಳ ಸೂಚನೆಯಂತೆ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ನೆಟ್ಟಣಿಗೆ ಮುಡ್ನೂರು ಚೀಚಗದ್ದೆಯ ಹನೀಫ್ ಯಾನೆ ಕೆಎಂವೈ ಹನೀಫ್, ಕೊಟ್ಯಾಡಿಯ ಮಹಮ್ಮದ್ ಕುಂಞಿ, ಕೊಟ್ಯಾಡಿಯ ಶಾಫಿ, ಸವಣೂರಿನ ಅಝರ್, ಸಯೀದ್ ಮೋನು, ನಾಸಿರ್ ಮತ್ತು ಕಾರ್ಕಳದವಳೆಂದು ಪರಿಚಯಿಸಿಕೊಂಡಿದ್ದ ತನೀಶಾ ಎಂಬವರ ವಿರುದ್ಧ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ತನಿಖೆ ಕೈಗೆತ್ತಿಗೊಂಡ ಉಪವಿಭಾಗದ ಡಿವೈಎಸ್ಪಿ ಡಾ.ಗಾನ ಪಿ.ಕುಮಾರ್ ನೇತೃತ್ವದ ಪೊಲೀಸರು ಪ್ರಕರಣದ ಆರೋಪಿಗಳ ಪೈಕಿ ತನೀಶಾ ಎಂಬವರನ್ನು ಬಂಧಿಸಿದ್ದಾರೆ. ಉಳಿದ ಆರು ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.