Connect with us

KARNATAKA

ಮಾಜಿ ಸಚಿವರಿಗೆ ಹನಿಟ್ರಾಪ್ ಮಾಡಿ ಲಕ್ಷಾಂತರ ರೂಪಾಯಿ ಡಿಮಾಂಡ್ , ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಮಂಜುಳಾ ಅರೆಸ್ಟ್..!!

ಬೆಂಗಳೂರು:  ಕಾಂಗ್ರೆಸ್‌ನ ಮಾಜಿ ಸಚಿವರೊಬ್ಬರಿಗೆ   ವಾಟ್ಸಪ್​ ಮೂಲಕ ವಿಡಿಯೊ ಕರೆಗಳನ್ನು ಮಾಡಿ ಅವುಗಳನ್ನು ರೆಕಾರ್ಡ್‌ ಮಾಡಿಕೊಂಡು ಹಣಕ್ಕೆ ಬ್ಲ್ಯಾಕ್​ ಮೇಲ್ ಮಾಡುತ್ತಿದ್ದ ನಲಪಾಡ್ ಬ್ರಿಗೇಡ್‌ನ ಕಲಬುರಗಿ ಘಟಕದ ಅಧ್ಯಕ್ಷೆ ಮಂಜುಳಾ  ಹಾಗೂ ಆಕೆಯ ಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈ ಆಡಿಯೋ-ವಿಡಿಯೋ ಬಹಿರಂಗಗೊಳಿಸದಿರಲು 20 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಮಂಜುಳಾ ಪಾಟೀಲ ಹಾಗೂ ಆಕೆಯ ಪತಿ ಶಿವರಾಜ್‌ ಪಾಟೀಲರನ್ನು ಸಿಸಿಬಿ ಬಂಧಿಸಿದೆ. ಮಂಜುಳಾ ಪಾಟೀಲ್ ಹನಿ ಟ್ರ್ಯಾಪ್ ಖೆಡ್ಡಾಗೆ ಮಾಜಿ ಸಚಿವರಷ್ಟೇ ಅಲ್ಲ, ಇನ್ನು ಅನೇಕ ಗಣ್ಯರನ್ನು ಖೆಡ್ಡಾಗೆ ಬೀಳಿಸಿರುವ ಮಾಹಿತಿ ಆಕೆಯ ಮೊಬೈಲ್​ನಲ್ಲಿ ಪತ್ತೆಯಾಗಿದೆ. ಮಂಜುಳಾ ಹಲವು ವರ್ಷಗಳಿಂದ ಕಾಂಗ್ರೆಸ್​ನಲ್ಲಿ ಸಕ್ರಿಯವಾಗಿದ್ದು ಜಿಲ್ಲೆಯ ಮಹಮ್ಮದ್ ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಾಗಿದ್ದಳು. ಹೀಗಾಗಿ ಮಾಲೀಕಯ್ಯಗೆ ಆಕೆಯ ಪರಿಚಯವಾಗಿತ್ತು. ಇಬ್ಬರೂ ದಿನ ಮೊಬೈಲ್‌ನಲ್ಲಿ ಸಲುಗೆಯಲ್ಲಿ ಮಾತನಾಡುತ್ತಿದ್ದರು. ಈ ನಡುವೆ ವಿಡಿಯೋ ಕಾಲ್‌ಗಳನ್ನು ರೆಕಾರ್ಡ್ ಮಾಡಿಕೊಂಡಿದ್ದ ಮಂಜುಳಾ, ಆ ಆಡಿಯೋ-ವಿಡಿಯೋಗಳನ್ನು ಮುಂದಿಟ್ಟು ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು.ಡೀಲ್ ಕುದುರಿಸಲು ಬೆಂಗಳೂರಿಗೆ ಆಗಮಿಸಿದ್ದ ದಂಪತಿ ಮಾಲೀಕಯ್ಯ ಪುತ್ರ ರಿತೀಶ್ ಅವರನ್ನು ಭೇಟಿಯಾಗಿದ್ದರು. ಈ ವಿಚಾರವಾಗಿ ರಿತೇಶ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ನಂತರ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಕೋರ್ಟ್ ಎಂಟು ದಿನ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶಿಸಿದೆ.ಬಂಧಿತ ಮಂಜುಳಾ ಪಾಟೀಲ್ ಬ್ಯಾಗ್ ನಲ್ಲಿ 6 ಸ್ಮಾರ್ಟ್ ಪೋನ್ ಪತ್ತೆ‌ಯಾಗಿವೆ. ಈ ಆರು ಫೋನ್​ಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಪರಿಶೀಲಿಸಿದಾಗ ಬರೋಬ್ಬರಿ ಎಂಟು ಜನರ ಖಾಸಗಿ ವಿಡಿಯೋಗಳು ಪತ್ತೆಯಾಗಿವೆ. ಮೊಬೈಲ್ ನಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ, ಪೊಲೀಸ್ ಅಧಿಕಾರಿ, ಪಿಡಬ್ಲೂಡಿ ಅಧಿಕಾರಿ ಸೇರಿ ಎಂಟು ಜನರ ವಿಡಿಯೋಗಳು ಪತ್ತೆಯಾಗಿದ್ದು, ಈ ಬಗ್ಗೆ ಸಿಸಿಬಿ ಪೊಲೀಸರು ಒಂದೊಂದಾಗಿ ಪರಿಶೀಲನೆ ನಡೆಸುತ್ತಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *