Connect with us

LATEST NEWS

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ, ಬೈಕ್ ತಪ್ಪಿಸಲು ಹೋಗಿ ಉರುಳಿ ಬಿದ್ದ ಬಸ್​ 8 ಜನ ಮೃತ್ಯು, 30 ಜನರಿಗೆ ಗಾಯ..!

ಮುಂಬೈ:  ಮಹಾರಾಷ್ಟ್ರ ದಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಡಿಕ್ಕಿ ತಪ್ಪಿಸಲು ಹೋಗಿ ಬಸ್ಸೊಂದು  ಉರುಳಿ ಬಿದ್ದ ಪರಿಣಾಮ ಕನಿಷ್ಟ​ 8 ಜನ  ಸಾವನ್ನಪ್ಪಿದರೆ 30 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಅನೇಕರ ಪರಿಸ್ಥಿತಿ ಚಿಂತಾಜನಕವಾಗಿದೆ.

ಮಹಾರಾಷ್ಟ್ರ ದ ಗೊಂಡಿಯಾ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಈ  ಭೀಕರ ಅಪಘಾತ ಸಂಭವಿಸಿದೆ. ರಾಜ್ಯ ಸಾರಿಗೆ ಸೇರಿ ಬಸ್ ಇದಾಗಿದ್ದು ನಾಗ್ಪುರದಿಂದ ಗೊಂಡಿಯಾಗೆ ತೆರಳುತ್ತಿತ್ತು ಎನ್ನಲಾಗಿದೆ.ಗೊಂಡಿಯಾ-ಅರ್ಜುನಿ ರಸ್ತೆಯ ಬಿಂದ್ರವನ ಟೋಲಾ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 30 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಗೊಂಡಿಯಾ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಂತ್ರಸ್ತರಿಗೆ ತಕ್ಷಣದ ಪರಿಹಾರವಾಗಿ ರೂ. 10 ಲಕ್ಷ ನೆರವು ನೀಡುವಂತೆ ಸಾರಿಗೆ ಆಡಳಿತಕ್ಕೆ ಆದೇಶಿಸಿದ್ದಾರೆ.

ಅಪಘಾತ ಸಂಭವಿಸಿದ ಸ್ಥಳದಿಂದ ಎಂಟು ಮೃತದೇಹಗಳು ಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ. ಸ್ಥಳೀಯ ಆಡಳಿತದಿಂದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲಾಗಿದ್ದು, ಗಾಯಾಳುಗಳಿಗೆ ತಕ್ಷಣದ ಮತ್ತು ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ.

 

Share Information
Continue Reading
Advertisement
1 Comment

1 Comment

    Leave a Reply

    Your email address will not be published. Required fields are marked *