LATEST NEWS
ಮನೆಗೆ ಬಿದ್ದ ಬೆಂಕಿಗೆ ಮನೆ ಮಾಲೀಕ ಸಜೀವ ದಹನ

ಕುಂದಾಪುರ ಎಪ್ರಿಲ್ 3: ಮನೆಯೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರು ಸಜೀವವಾಗಿ ದಹನವಾದ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ. ಮೃತರನ್ನು ಗಂಗೊಳ್ಳಿ ಗ್ರಾಮದ ದೊಡ್ಡಹಿತ್ಲು ನಿವಾಸಿ ಗಣೇಶ್ ಖಾರ್ವಿ (45) ಎಂದು ಗುರುತಿಸಲಾಗಿದೆ.
ಮೀನುಗಾರಿಕೆ ಬೋಟಿನಲ್ಲಿ ಕೆಲಸ ಮಾಡುತ್ತಿದ್ದ ಗಣೇಶ ಖಾರ್ವಿ ಇಂದು ಮುಂಜಾನೆ ಗಂಗೊಳ್ಳಿ ಬಂದರಿನಲ್ಲಿರುವ ಬೋಟಿನ ಸಮೀಪ ಹೋಗಿ ಪುನಃ ಮನೆಯಲ್ಲಿ ಬಂದು ಮಲಗಿದ್ದರು ಎನ್ನಲಾಗಿದೆ. ಇದೇ ಸಂದರ್ಭ ಬೆಳಿಗ್ಗೆ ಸುಮಾರು ಮನೆಯಲ್ಲಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಮನೆಯಲ್ಲಿ ಗಣೇಶ್ ಖಾರ್ವಿ ಇರುವ ಬಗ್ಗೆ ಮಾಹಿತಿ ಇರದ ಹಿನ್ನಲೆ ಆಕಸ್ಮಿಕ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಗಣೇಶ ಖಾರ್ವಿ ಮಲಗಿದ್ದಲ್ಲೆ ಸುಟ್ಟು ಸಜೀವ ದಹನಗೊಂಡಿದ್ದಾರೆ.
