LATEST NEWS
ಮೂಡಿಗೆರೆಯಲ್ಲಿ ಗೃಹಿಣಿ ಅಸಹಜ ಸಾವು, ಪತಿ ವಿರುದ್ದ ವಿಷದ ಇಂಜೆಕ್ಷನ್ ನೀಡಿ ಕೊಲೆ ಆರೋಪ..!
ಚಿಕ್ಕಮಗಳೂರು: ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಗೃಹಿಣಿಯೊಬ್ಬಳು ಅನುಮಾನಾಸ್ಪದವಾಗಿ ಮನೆಯಲ್ಲಿ ಸಾವನ್ನಪ್ಪಿದ್ದು ವಿಷದ ಇಂಜೆಕ್ಷನ್ ನೀಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ಈ ಘಟನೆ ನಡೆದಿದೆ, ಶ್ವೇತಾ ಮೃತ ಮಹಿಳೆಯಾಗಿದ್ದಾಳೆ. ಇನ್ನು ಶ್ವೇತಾಳ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿರುವ ವೇಳೆ ಮಧ್ಯ ಪ್ರವೇಶಿಸಿದ ಕುಟುಂಬಸ್ಥರು ಇದು ಸಹಜ ಸಾವಲ್ಲ, ಪತಿಯೇ ಶ್ವೇತಾ ಅವರನ್ನು ವಿಷದ ಇಂಜೆಕ್ಷನ್ ನೀಡಿ ಕೊಲೆ ಮಾಡಿದ್ದಾನೆ ಎಂದು ಆರೋಪಿದ್ದಾರೆ. ಮತ್ತು ಅಂತ್ಯ ಕ್ರಿಯೆಯನ್ನು ತಡೆದು ಶವ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ತಿಳಿದು ಬಂದಿದೆ. ಶ್ವೇತಾ ಅವರ ಪತಿ ದರ್ಶನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಆತನೇ ಪಾಯಿಸನ್ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿರುವ ಬಗ್ಗೆ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ಶ್ವೇತಾ ಹಾಗೂ ದರ್ಶನ್ ಬೆಂಗಳೂರಿನಲ್ಲಿ ನೆಲೆಸಿದ್ದು, ನಾಲ್ಕು ದಿನಗಳ ಹಿಂದೆ ದೇವವೃಂದಕ್ಕೆ ಬಂದಿದ್ದರು. ಈ ವೇಳೆ ಹಾರ್ಟ್ ಅಟ್ಯಾಕ್ ನಿಂದ ಶ್ವೇತಾ ಮೃತಪಟ್ಟಿದ್ದಾಳೆಂದು ಪತಿ ದರ್ಶನ್ ಆಕೆಯ ಕುಟುಂಬಕ್ಕೆ ತಿಳಿಸಿದ್ದ. ದರ್ಶನ್ ಅನೈತಿಕ ಸಂಬಂಧ ಹೊಂದಿದ್ದು, ಇದಕ್ಕೆ ಪತ್ನಿ ಅಡ್ಡಿಯಾದ ಹಿನ್ನಲೆ ಇಂಜಕ್ಷನ್ ನೀಡಿ ಕೊಲೆ ಮಾಡಿರಬಹುದೆಂದು ಆರೋಪಿಸಿರುವ ಶ್ವೇತಾ ಕುಟುಂಬದವರು ತಾರತುರಿಯಲ್ಲಿ ಅಂತ್ಯಕ್ರಿಯೆ ನಡೆಸಲು ಮುಂದಾದವರನ್ನು ತಡೆದು ಶವ ಪರೀಕ್ಷೆಗೆ ಚಿಕ್ಕಮಗಳೂರು ನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಶ್ವೇತಾ ಕೈಯಲ್ಲಿ ಇಂಜೆಕ್ಷನ್ ನೀಡಿರುವ ಗುರುತು ಸಹ ಪತ್ತೆಯಾಗಿದೆ.ಶ್ವೇತಾ ಸಾವಿಗೂ ಮುನ್ನ ಮಾತನಾಡಿದ ಆಡಿಯೋ ವೈರಲ್ ಆಗಿದೆ. ಪತಿ ಸಹೋದ್ಯೋಗಿಯನ್ನು ಲವ್ ಮಾಡುತ್ತಿದ್ದರು. ಶ್ವೇತಾ ಪತಿಯ ಸಹೋದ್ಯೋಗಿ ಜೊತೆ ಮಾತನಾಡಿರುವ ಆಡಿಯೋ ಪೊಲೀಸರಿಗೆ ಸಿಕ್ಕಿದೆ.ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.