Connect with us

    KARNATAKA

    HSRP ನಂಬರ್ ಪ್ಲೇಟ್ ಮತ್ತೆ ಮೂರು ತಿಂಗಳು ವಿಸ್ತರಣೆ

    ಬೆಂಗಳೂರು ಫೆಬ್ರವರಿ 14: ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ HSRP ಆಳವಡಿಸುವ ಅಂತಿಮ ದಿನಾಂಕವನ್ನು ಮತ್ತೆ ವಿಸ್ತರಣೆ ಮಾಡಲಾಗುವುದು ಎಂದು ರಾಜ್ಯಸರಕಾರ ತಿಳಿಸಿದೆ.


    ವಿಧಾನ​ ಪರಿಷತ್​​ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಮಾದೇಗೌಡ ಅವರು ಮಾತನಾಡಿ ರಾಜ್ಯದಲ್ಲಿ ಎರಡು ಕೋಟಿಗೂ ಹೆಚ್ಚಿನ ವಾಹನಗಳಿವೆ. ಹಳ್ಳಿ ಜನರು ವಾಹನಗಳಿಗೆ ಇನ್ನೂ ಹೆಚ್​ಎಸ್​ಆರ್​ಪಿ ನೇಮ್ ಪ್ಲೇಟ್ ಅಳವಡಿಸಬೇಕು. ಆನ್​ಲೈನ್​ನಲ್ಲಿ ನೊಂದಣಿ ಮಾಡಬೇಕಿರುವ ಹಿನ್ನೆಲೆಯಲ್ಲಿ ಫೇಕ್​ ವೆಬ್ ಸೈಟ್ ಹಾವಳಿ ಹೆಚ್ಚಾಗಿದೆ ಇದರ ಬಗ್ಗೆ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕು.

     

    ಅಲ್ಲದೆ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆಗೆ ಅವಧಿಯನ್ನು ಸರ್ಕಾರ ನೀಡಿರುವ ಗಡುವು ವಿಸ್ತರಿಸಬೇಕು ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಚಿವ ರಾಮಲಿಂಗಾರೆಡ್ಡಿ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​​ ಅಳವಡಿಸುವ ಗಡುವನ್ನು ಮೂರು ತಿಂಗಳು ವಿಸ್ತರಿಸಲಾಗುತ್ತದೆ. ಇನ್ನು ಫೇಕ್​ ವೆಬ್ ಸೈಟ್ ಬಗ್ಗೆ ಎಚ್ಚರ ವಹಿಸಲಾಗುತ್ತದೆ. ಈ ಯೋಜನೆ ಪಾರದರ್ಶಕವಾಗಿದೆ ಎಂದು ಸದನಕ್ಕೆ ತಿಳಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply