Connect with us

LATEST NEWS

ಹುಬ್ಬಳ್ಳಿ: ಬಸ್-ಲಾರಿ ನಡುವೆ ಡಿಕ್ಕಿ 9 ಮಂದಿ ಸಾವು, 24 ಮಂದಿಗೆ ಗಾಯ

ಹುಬ್ಬಳ್ಳಿ, ಮೇ 24 : ನಗರದ ಹೊರವಲಯದ ತಾರಿಹಾಳದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಚಾಲಕ, ಕ್ಲೀನರ್ ಸೇರಿದಂತೆ 9 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಮತ್ತು 24 ಜನರಿಗೆ ಗಂಭೀರ ಗಾಯಗಳಾಗಿವೆ. ಹಲವರ ಸ್ಥಿತಿ ಚಿಂತಾಜನಕವಾಗಿದೆ.

ಹುಬ್ಬಳ್ಳಿ ಹೊರವಲಯದ ತಾರಿಹಾಳ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಅಕ್ಕಿಚೀಲಗಳೊಂದಿಗೆ ಧಾರವಾಡ ಕಡೆ ಹೊರಟಿದ್ದ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಮುಂದೆ ಹೋಗುತ್ತಿದ್ದ ಟ್ರ್ಯಾಕ್ಟರ್ ಓವರ್ ಟೇಕ್ ಮಾಡಲು ಹೋದ ಲಾರಿ ಡ್ರೈವರ್ ಈ ಭೀಕರ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಅಲ್ಲದೇ ಮೃತರೆಲ್ಲರೂ ಮಹಾರಾಷ್ಟ್ರದ ಕೊಲ್ಹಾಪುರದವರಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಗಳಿವೆ. ಸದ್ಯ ಗಾಯಾಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *