Connect with us

KARNATAKA

ಹುಬ್ಬಳ್ಳಿ: ಅಯ್ಯಪ್ಪ ಮಾಲಾಧಾರಿಗಳ ಸಾವು, 8ಕ್ಕೇರಿದ ಸಾವಿನ ಸಂಖ್ಯೆ

ಹುಬ್ಬಳ್ಳಿ, ಡಿಸೆಂಬರ್ 31: ಹುಬ್ಬಳ್ಳಿಯ ಅಗ್ನಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಪ್ರಕಾಶ ಬಾರಕೇರ (42) ಕಿಮ್ಸ್​​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮೃತ ಪ್ರಕಾಶ ಬಾರಕೇರ, ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದಾರೆ.

ಸೋಮವಾರ ರಾತ್ರಿಯಷ್ಟೇ ಅಯ್ಯಪ್ಪ ಮಾಲಾಧಾರಿ ತೇಜಸ್ವರ್ (27)​​ ಮೃತಪಟ್ಟಿದ್ದರು. ಇದೀಗ 9 ಗಾಯಾಳುಗಳ ಪೈಕಿ 8 ಅಯ್ಯಪ್ಪ ಮಾಲಾಧಾರಿಗಳ ಸಾವಾಗಿದ್ದು, ಕಿಮ್ಸ್​​ನಲ್ಲಿ ಓರ್ವ ಗಾಯಾಳು ಮಾಲಾಧಾರಿಗೆ ಚಿಕಿತ್ಸೆ ಮುಂದುವರಿದಿದೆ.

ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪನ ಸನ್ನಿಧಿಯಲ್ಲಿ ಸಂಭವಿಸಿದ್ದ ಭೀಕರ ಸಿಲಿಂಡರ್ ಸ್ಫೋಟ ಎಲ್ಲರನ್ನೂ ಬೆಚ್ಚಿಬೀಳಿಸಿತ್ತು. 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಬೆಂಕಿಯಲ್ಲಿ ಬೆಂದು ಕಿಮ್ಸ್​ ಆಸ್ಪತ್ರೆ ಸೇರಿದ್ದರು. ತಜ್ಞ ವೈದ್ಯರಿಂದ ಚಿಕಿತ್ಸೆ ಕೊಡಿಸಿದರೂ ಗಾಯಾಳುಗಳನ್ನು ಉಳಿಸಿಕೊಳ್ಳಲು ಆಗುತ್ತಿಲ್ಲ. ಸಾವಿನ ಸರಣಿ ಮುಂದುವರಿದಿದ್ದು ಸೋಮವಾರ ರಾತ್ರಿ ರಾಮನಗರ ನಿವಾಸಿ 26 ವರ್ಷದ ತೇಜಸ್ವರ್ ಸಾತರೆ ಉಸಿರು ಚೆಲ್ಲಿದ್ದಾರೆ. ಮೃತ ತೇಸಜ್ವರ್ 3 ವರ್ಷದಿಂದ ಅಯ್ಯಪ್ಪ ಸ್ವಾಮಿ ಮಾಲೆ ಹಾಕುತ್ತಿದ್ದರು ಎನ್ನಲಾಗಿದೆ. ಅಯ್ಯಪ್ಪನ ಆಶೀರ್ವಾದದಿಂದ ಮಗ ಬದುಕಿ ಬರಬಹುದು ಎಂದುಕೊಂಡಿದ್ದ ಕುಟುಂಬಕ್ಕೆ ಸಾವಿನ ಸುದ್ದಿಯಿಂದ ಆಕಾಶಾವೇ ತಲೆ ಮೇಲೆ ಕಳಚಿ ಬಿದ್ದಂತಾಗಿದೆ.

ಡಿಸೆಂಬರ್ 22 ರಿಂದ ಕಿಮ್ಸ್ ಆಸ್ಪತ್ರೆಯಲ್ಲಿ ತೇಜಸ್ವರ್​ಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಕಿಮ್ಸ್ ಆಸ್ಪತ್ರೆಬಳಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಗಂಭೀರವಾಗಿ ಗಾಯಗೊಂಡಿರುವ 9 ಜನ ಮಾಲಾಧಾರಿಗಳ ಪೈಕಿ ಇದೀಗ ಒಬ್ಬ ಗಾಯಾಳು ಮಾತ್ರ ಬದುಕುಳಿದಿದ್ದಾರೆ. ಅವರಿಗೆ ಚಿಕಿತ್ಸೆ ಮುಂದುವರಿದಿದೆ. .

Share Information
Continue Reading
Advertisement
Click to comment

Leave a Reply

Your email address will not be published. Required fields are marked *