KARNATAKA
ಹುಬ್ಬಳ್ಳಿಯ ಈದ್ಗಾ ಮೈದಾನ ಯಾರಪ್ಪನ ಆಸ್ತಿ ಅಲ್ಲ : ಬಸನ ಗೌಡ ಪಾಟೀಲ್ ಯತ್ನಾಳ್..!

ಈದ್ಗಾ ಮೈದಾನದಲ್ಲಿ ಮಾತನಾಡಿರುವ ಯತ್ನಾಳ್ ಹುಬ್ಬಳ್ಳಿಯ ಈದ್ಗಾ ಮೈದಾನ ಯಾರಪ್ಪನ ಆಸ್ತಿ ಅಲ್ಲ.ಅಂಜುಮನ್ ಆಸ್ತಿ ಅಲ್ಲಾ, ಪಾಕಿಸ್ತಾನದ ಆಸ್ತಿ ಅಲ್ಲ. ರಾಜ್ಯದ ವಕ್ಫ್ ಆಸ್ತಿ. ಇದನ್ನು ಸರ್ಕಾರದ ವಶಕ್ಕೆ ಪಡೆಯಲು ಹೋರಾಡುತ್ತಿದ್ದೇವೆ. ಮುಂದೆ ಇದೇ ಮೈದಾನದಲ್ಲಿ ಹನುಮಾನ್ ಚಾಲೀಸಾ ಪಠಣ ಮಾಡುತ್ತೇವೆ,
ಹುಬ್ಬಳ್ಳಿ : ವಿವಾದದ ಕೇಂದ್ರ ಬಿಂದುವಾಗಿದ್ದ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶನ ಮೂರ್ತಿ ವಿಸರ್ಜನೆಯನ್ನು ಗುರುವಾರ ಸಂಭ್ರಮ ಸಡಗರದಿಂದ ನೆರವೇರಿಸಲಾಯಿತು.

ನಗರದ ಹೃದಯಭಾಗವಾದ ಚೆನ್ನಮ್ಮ ವೃತ್ತದ ಬಳಿ ಇರುವ ಮೈದಾನದಲ್ಲಿ ಮೂರು ದಿನಗಳ ಕಾಲ ಪ್ರತಿಷ್ಠಾಪಿಸಿದ್ದ ಗಣೇಶನಿಗೆ ಬೆಳಿಗ್ಗೆ ಪೂಜೆ ಸಲ್ಲಿಸಿದ ನಂತರ ನಗರದಲ್ಲಿ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳ ಪ್ರದರ್ಶನದೊಂದಿಗೆ ಸಾಂಸ್ಕøತಿಕ ವೈಭವ ಆಕರ್ಷಕವಾಗಿತ್ತು.
ರಸ್ತೆಯುದ್ದಕ್ಕೂ ಕೇಸರಿ ಬಾವುಟಗಳು ರಾರಾಜಿಸುತ್ತಿರುವುದು ಕಂಡು ಬಂತು. ಸಾವಿರಾರು ಭಕ್ತರು ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.
ಮೆರವಣಿಗೆಯು ಕಿತ್ತೂರು ರಾಣಿ ಚೆನ್ನಮ್ಮ ಮೈದಾನದಿಂದ ಸಾಗಿ ಹಳೇ ಬಸ್ ನಿಲ್ದಾಣ ಮಾರ್ಗವಾಗಿ ನಗರದ ಇಂದಿರಾ ಗಾಜಿನ ಮನೆಯವರೆಗೂ ಸಾಗಿ, ನಂತರ ಪಕ್ಕದ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಕಾರ್ಯ ನೆರವೇರಿತು.
ಬಿಗಿ ಪೊಲೀಸ್ ಬದೋಬಸ್ತನ್ನು ಏರ್ಪಡಿಸಲಾಗಿತ್ತು. ಶಾಸಕರುಗಳಾದ ಅರವಿಂದ ಬೆಲ್ಲದ, ಬಸನಗೌಡ ಪಾಟೀಲ ಯತ್ನಾಳ, ಮಹೇಶ ಟೆಂಗಿನಕಾಯಿ, ಎಮ್.ಆರ್. ಪಾಟೀಲ, ಮಾಜಿ ಶಾಸಕ ಅಮೃತ ದೇಸಾಯಿ ಸೇರಿದಂತೆ ಅನೇಕ ಪ್ರಮುಖರು , ಅಸಂಖ್ಯಾತ ಹಿಂದೂ ಬಾಂಧವರು ಪಾಲ್ಗೊಂಡಿದ್ದರು.
ಮೆರವಣಿಗೆಗೂ ಮುನ್ನ ಈದ್ಗಾ ಮೈದಾನದಲ್ಲಿ ಮಾತನಾಡಿರುವ ಯತ್ನಾಳ್ ಹುಬ್ಬಳ್ಳಿಯ ಈದ್ಗಾ ಮೈದಾನ ಯಾರಪ್ಪನ ಆಸ್ತಿ ಅಲ್ಲ.
ಅಂಜುಮನ್ ಆಸ್ತಿ ಅಲ್ಲಾ, ಪಾಕಿಸ್ತಾನದ ಆಸ್ತಿ ಅಲ್ಲ. ರಾಜ್ಯದ ವಕ್ಫ್ ಆಸ್ತಿ. ಇದನ್ನು ಸರ್ಕಾರದ ವಶಕ್ಕೆ ಪಡೆಯಲು ಹೋರಾಡುತ್ತಿದ್ದೇವೆ. ಮುಂದೆ ಇದೇ ಮೈದಾನದಲ್ಲಿ ಹನುಮಾನ್ ಚಾಲೀಸಾ ಪಠಣ ಮಾಡುತ್ತೇವೆ,
2024ರಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗುತ್ತಾರೆ. ಆಗ ಪಾಕಿಸ್ತಾನದ ಲಾಹೋರ್ನಲ್ಲೂ ಗಣಪತಿ ಮೂರ್ತಿ ಕೂರಿಸುತ್ತೇವೆ.
ಇಲ್ಲಿ ರಾಷ್ಟ್ರಧ್ವಜ ಹಾರಿಸಲು ಈ ಮಕ್ಕಳ ಅನುಮತಿ ಬೇಕಂತೆ. ನಾವು ಚಂದ್ರನ ಮೇಲೆ ರಾಷ್ಟ್ರಧ್ವಜ ಹಾರಿಸಿ ಬಂದಿದ್ದೇವೆ” ಎಂದು ಗುಡುಗಿದ್ದಾರೆ.