KARNATAKA
ಹುಬ್ಬಳ್ಳಿ : ದೂದ್ ಸಾಗರ್ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು, ಹಳಿಯಿಂದ ಬೇರ್ಪಟ್ಟ11 ಬೋಗಿಗಳು..!
ಹುಬ್ಬಳ್ಳಿ : ದೂದ್ ಸಾಗರ ಹಾಗೂ ಸೋನಾಲಿಂ ಮಾರ್ಗ ಮಧ್ಯೆ ಕಲ್ಲಿದ್ದಲು ಸಾಗಿಸುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿದ್ದು 11 ಬೋಗಿಗಳು ಹಳಿಯಿಂದ ಬೇರ್ಪಟ್ಟಿವೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಹುಬ್ಬಳ್ಳಿ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ.
ಗೋವಾದ ವಾಸ್ಕೋದಿಂದ ಹೊಸಪೇಟೆಗೆ ತೆರಳುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿದ್ದರಿಂದ 11 ಬೋಗಿಗಳು ನೆಲಕ್ಕುರುಳಿ ಕಲ್ಲಿದ್ದಲು ವ್ಯರ್ಥವಾಗಿದೆ. ಗೋವಾದ ವಾಸ್ಕೋದಿಂದ ಹೊಸಪೇಟೆ ಬಳಿಯ ಜಿಂದಲ್ ಕಂಪನಿಗೆ ಕಲ್ಲಿದ್ದಲು ಕೊಂಡೊಯ್ಯುತಿದ್ದ ರೈಲು ಇದಾಗಿದ್ದು ದೂದ್ ಸಾಗರ್‌ನಿಂದ ಸೋನಾಲಿಂ ನಡುವಿನ ಸುರಂಗ ಸಂಖ್ಯೆ 15ರ ಸಮೀಪ ತೋರಣಗಲ್ ಹೊಸಪೇಟೆಯಲ್ಲಿ ವಾಸ್ಕೋದಿಂದ ಜಿಂದಾಲ್ ಕಂಪನಿಗೆ ಕಲ್ಲಿದ್ದಲು ಸಾಗಿಸುವ ಸರಕು ರೈಲು ದಬ್ಬೆಯಲ್ಲಿ ಹಳಿ ತಪ್ಪಿದೆ. ಸದ್ಯ ಈ ಮಾರ್ಗದಲ್ಲಿ ಎಲ್ಲಾ ರೈಲು ಸಂಚಾರ ಸ್ಥಗಿತ ಮಾಡಲಾಗಿದೆ ಎಂದು ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
You must be logged in to post a comment Login