Connect with us

    KARNATAKA

    ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನಿರಾಕರಣೆ – ಸಿಎಂಡಿಸಿಎಂ ಪ್ರತಿಕೃತಿ ದಹಿಸಿ ಆಕ್ರೋಶ..!

    ಹುಬ್ಬಳ್ಳಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ರಸ್ತೆ ತಡೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಶಿವಕುಮಾರ್ ಅವರ ಪ್ರತಿಕೃತಿ ದಹನ ಮಾಡಿದ್ದಾರೆ.
    ಹುಬ್ಬಳ್ಳಿ: ಹುಬ್ಬಳ್ಳಿ ನಗರದ ಈದ್ಗಾ ಮೈದಾನದಲ್ಲಿ ಹಿಂದೂ ಪರ ಸಂಘಟನೆಗಳಿಗೆ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಅನುಮತಿ ಕೊಟ್ಟರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅನುಮತಿ ನೀಡುತ್ತಿಲ್ಲ.

    ಇದರಿಂದ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ರಸ್ತೆ ತಡೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಶಿವಕುಮಾರ್ ಅವರ ಪ್ರತಿಕೃತಿ ದಹನ ಮಾಡಿದ್ದಾರೆ.

    ಹೈಕೋರ್ಟ್ ನಿರ್ಣಯ ಪ್ರಕಟಗೊಂಡರೂ ಅನುಮತಿ ಕೊಡದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಅನುಮತಿ ವಿಳಂಬಕ್ಕೆ ಮತ್ತಷ್ಟು ಕಿಡಿಕಾರಿದ್ದು, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆವರಣದಿಂದ ಹೊರಗಡೆ ಬಂದು ರಸ್ತೆ ತಡೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

    ಮೊದಲು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮುಂಭಾಗ ರಸ್ತೆ ತಡೆ ನಡೆಸಿ ಉಗ್ರ ಹೋರಾಟಕ್ಕೆ ಮುಂದಾದ ಕಾರ್ಯಕರ್ತರು ರಸ್ತೆಯಲ್ಲಿಯೇ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ‌ ಅಸಮಾಧಾನ ವ್ಯಕ್ತಪಡಿಸಿದರು.

    ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಶಾಸಕ ಅರವಿಂದ ಬೆಲ್ಲದ್‌ ಹಾಗೂ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕ ಶಾಸಕ ಮಹೇಶ ಟೆಂಗಿನಕಾಯಿ ಪ್ರತಿಭಟನೆಗೆ ಸಾಥ್ ನೀಡಿದ್ದಾರೆ.

    ಅರ್ಧಗಂಟೆಗಳ ಕಾಲ ರಸ್ತೆಯಲ್ಲಿಯೇ ಪ್ರತಿಭಟನೆ ಮಾಡಿದ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಹಾಗೂ ಪ್ರಯಾಣಿಕರು ಪರದಾಟ ನಡೆಸಿದರು,ಪ್ರತಿಭಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಭೇಟಿ ನೀಡಿದ್ದು, ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನ ಮಾಡಿದರೂ ವಿಫಲವಾಯಿತು.

     

    Share Information
    Advertisement
    Click to comment

    You must be logged in to post a comment Login

    Leave a Reply