ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಬೃಹತ್ ಹೋರಾಟ – ವಿಎಚ್ ಪಿ

ಮಂಗಳೂರು ನವೆಂಬರ್ 13: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ವಿಶ್ವಹಿಂದೂ ಪರಿಷತ್ ನೇತೃತ್ವದಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಬೃಹತ್ ರಾಮಮಂದಿರ ಹೋರಾಟಕ್ಕೆ ಸಿದ್ದತೆ ನಡೆಸಲಾಗಿದೆ.

ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿಶ್ವಹಿಂದೂ ಪರಿಷತ್ ರಾಜ್ಯಾಧ್ಯಕ್ಷ ಎಂ.ಬಿ.ಪುರಾಣಿಕ್ ದಕ್ಷಿಣಕನ್ನಡ, ಉಡುಪಿ, ಕೊಡಗು ಮತ್ತು ಕಾಸರಗೋಡಿನಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಬೃಹತ್ ಜನಾಗ್ರಹ ಸಮಾವೇಶವನ್ನು ನಡೆಸಲು ನಿರ್ಧರಿಸಲಾಗಿದೆ.

ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಡೆಯಲಿರುವ ಈ ಬೃಹತ ಹೋರಾಟದಲ್ಲಿ ದಕ್ಷಿಣಕನ್ನಡ, ಉಡುಪಿ, ಕೊಡಗು ಮತ್ತು ಕಾಸರಗೋಡಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.

ಮಂಗಳೂರು ವಿಭಾಗದ ನಾಲ್ಕು ಕಡೆ ಬೃಹತ್ ಸಮಾವೇಶ ನಡೆಯಲಿದೆ. ನವೆಂಬರ್ 25 ಮಂಗಳೂರು, ನವೆಂಬರ್ 18 ಕಾಸರಗೋಡು, ನವೆಂಬರ್ 30 ಕೊಡಗು ಮತ್ತು ಡಿಸೆಂಬರ್ 2 ರಂದು ಉಡುಪಿಯಲ್ಲಿ ಸಮಾವೇಶ ನಡೆಯಲಿದೆ. ಕೇಂದ್ರ ಸರ್ಕಾರಕ್ಕೆ ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಆಗ್ರಹ ಪಡಿಸಲು ಈ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು. ದೇಶದ ಪ್ರಮುಖ ಸಾಧು-ಸಂತರ ನೇತೃತ್ವದಲ್ಲಿ ಈ ಸಮಾವೇಶ ನಡೆಯಲಿದೆ.

Facebook Comments

comments