Connect with us

    LATEST NEWS

    ಮರಳಿಗಾಗಿ ನವೆಂಬರ್ 3 ರಂದು ಬಿಜೆಪಿಯಿಂದ ಬೃಹತ್ ಪ್ರತಿಭಟನೆ

    ಮರಳಿಗಾಗಿ ನವೆಂಬರ್ 3 ರಂದು ಬಿಜೆಪಿಯಿಂದ ಬೃಹತ್ ಪ್ರತಿಭಟನೆ

    ಮಂಗಳೂರು ನವೆಂಬರ್ 1 ನವೆಂಬರ್ 3 ರಂದು ಭಾರತೀಯ ಜನತಾ ಪಾರ್ಟಿಯ ವತಿಯಿಂದ ಮರಳಿಗಾಗಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳಿನ ಕೊರತೆಯಿಂದ ವ್ಯಾಪಕ ಸಮಸ್ಯೆಯಾಗಿದೆ. ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತ ಮರಳು ತೆಗೆಯುವುದಕ್ಕೆ ಅನುಮತಿ ನೀಡಲು ಮೀನಾಮೇಷ ಎಣಿಸುತ್ತಿವೆ. ಇದು ಸರಿಯಾದ ಕ್ರಮವಲ್ಲ.ಮುಖ್ಯಮಂತ್ರಿಯವರು ನಮ್ಮ ಜಿಲ್ಲೆಯ ಮಧ್ಯಮ, ಕೆಳ ಮಧ್ಯಮ ವರ್ಗದ ಜನರ ಕಷ್ಟವನ್ನು ಅರಿತುಕೊಳ್ಳಬೇಕು ಎಂದು ಶಾಸಕ ಕಾಮತ್ ಹೇಳಿದ್ದಾರೆ.

    ರಾಜ್ಯ ಸರಕಾರದ ಈ ನೀತಿಯನ್ನು ವಿರೋಧಿಸಿ ಮಂಗಳೂರು ನಗರ ದಕ್ಷಿಣ ಮತ್ತು ಮಂಗಳೂರು ನಗರ ಉತ್ತರದ ವತಿಯಿಂದ ನವೆಂಬರ್ 3 ರಂದು ಶನಿವಾರ ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆಯ ತನಕ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಗೇಟಿನ ಮುಂಭಾಗ ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ ಎಂದು ಹೇಳಿದರು.

    Share Information
    Advertisement
    Click to comment

    You must be logged in to post a comment Login

    Leave a Reply