LATEST NEWS
25ನೇ ವಿವಾಹ ವಾರ್ಷಿಕೋತ್ಸವದಲ್ಲಿ ಪತ್ನಿ ಜತೆ ನೃತ್ಯ ಪತಿ ಮೃತ್ಯು

ಉತ್ತರ ಪ್ರದೇಶ, ಏಪ್ರಿಲ್ 04: ತಮ್ಮ 25ನೇ ವಿವಾಹ ವಾರ್ಷಿಕೋತ್ಸವದಲ್ಲಿ ವ್ಯಕ್ತಿಯೊಬ್ಬರು ಪತ್ನಿ ಜತೆ ನೃತ್ಯ ಮಾಡುತ್ತಿರುವಾಗ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.
ವೇದಿಕೆಯಲ್ಲಿ ಪತ್ನಿ ಜತೆ ನೃತ್ಯ ಮಾಡುತ್ತಿದ್ದರು, ಏಕಾಏಕಿ ಕುಸಿದು ಬಿದ್ದಿದ್ದಾರೆ. ಅತಿಥಿಗಳು ಆಘಾತಕ್ಕೊಳಗಾಗಿದ್ದರು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಆದರೆ ಅಷ್ಟರಲ್ಲಾಗಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಮೃತರನ್ನು ವಾಸಿಮ್ ಸರ್ವತ್ ಎಂದು ಗುರುತಿಸಲಾಗಿದೆ.
1 Comment