Connect with us

KARNATAKA

ಎಲ್ಲವೂ ಆಸ್ತಿಗಾಗಿ..! ಮೊದಲ ಹೆಂಡತಿ ಮಕ್ಕಳ ಜೊತೆ ಸೇರಿ 2ನೇ ಪತ್ನಿಯನ್ನು ಹತ್ಯೆ ಮಾಡಿದ ಕಿರಾತಕ ಪತಿ..!

ಮೈಸೂರು :  ಮೈಸೂರಿನ ನಾಯ್ಡುನಗರದಲ್ಲಿ ಆಸ್ತಿಗಾಗಿ ಮೊದಲ ಹೆಂಡತಿ ಮಕ್ಕಳ ಜೊತೆ ಸೇರಿ ಎರಡನೇ ಪತ್ನಿಯನ್ನು ಪತಿಯೇ ಹತ್ಯೆ ಮಾಡಿರುವ ಘಟನೆ ನಡೆದಿದೆ. ಅಖಿಲಾ ಭಾನು (46) ಮೃತ ಮಹಿಳೆಯಾಗಿದ್ದಾಳೆ.

ಆರೋಪಿ ಅಬ್ಬ ಸಿಲ್ಕ್ ಫ್ಯಾಕ್ಟರಿಯಲ್ಲಿ ನೌಕರನಾಗಿದ್ದು, 2013 ರಲ್ಲಿ ಅಖಿಲಾ ಭಾನು ಅವರನ್ನು ಎರಡನೇ ವಿವಾಹವಾಗಿದ್ದ. ಆತನ ಮೊದಲ ಹೆಂಡತಿಗೆ ನಾಲ್ವರು ಮಕ್ಕಳಿದ್ದರು. ಎರಡನೇ ಪತ್ನಿ ಅಖಿಲಾ ಭಾನು ಕ್ಯಾನ್ಸರ್​​  ಕಾಯಿಲೆಯಿಂದ ಬಳಲುತ್ತಿದ್ದು, ಬಳಿಕ ಗುಣಮುಖರಾಗಿದ್ದರು. ಆಕೆಗೆ ಮಕ್ಕಳಿರಲಿಲ್ಲ. 6 ತಿಂಗಳ ಹಿಂದಷ್ಟೇ ಅಖಿಲಾ ಭಾನು ಅವರ ಅಕ್ಕನ ಮಗ ಸೈಯದ್ ಇರ್ಫಾನ್ ಎಂಬವರು ಅವರಿಗಾಗಿ ನಾಯ್ಡುನಗರದಲ್ಲಿ ಒಂದು ಮನೆ ಖರೀದಿಸಿಕೊಟ್ಟಿದ್ದರು. ತಯ್ಯೂಬ್ ಹಾಗೂ ಅಖಿಲಾ ಭಾನು ಇಬ್ಬರ ಹೆಸರಲ್ಲಿ ಮನೆಯ ಜಂಟಿ ನೋಂದಣಿಯಾಗಿತ್ತು ಎನ್ನಲಾಗಿದೆ. ಈ ನಡುವೆ, ಅಬ್ಬ ಥಾಯುಬ್‌ಗೆ ಈ ಮನೆಯನ್ನು ಇತ್ತೀಚೆಗೆ ಮೊದಲ ಹೆಂಡತಿಯ ಮಕ್ಕಳಿಗೆ ಬರೆದು ಕೊಡುವ ಯೋಚನೆ ಹುಟ್ಟಿಕೊಂಡಿತ್ತು. ಈ ವಿಚಾರದಲ್ಲಿ ಗಂಡ ಹೆಂಡತಿ ಮಧ್ಯೆ ಆಗಾಗ ಗಲಾಟೆಯಾಗುತ್ತಿತ್ತು. ಫೆಬ್ರವರಿ 16ರ ಬೆಳಿಗ್ಗೆ ಇದ್ದಕ್ಕಿದ್ದಂತೆ ಸೈಯದ್ ಇರ್ಫಾನ್ ಮನೆಗೆ ಬಂದ ಅಬ್ಬ ಥಾಯೂಬ್ ಕಣ್ಣೀರಿಡುತ್ತಾ, ಅಖಿಲಾ ಭಾನು ಮೃತಪಟ್ಟಿದ್ದಾಳೆ  ಎಂದು ಗೋಳಾಡಿದ್ದ. ರಾಜೇಂದ್ರ ನಗರದ ಮನೆಯಲ್ಲಿ ಇರಿಸಲಾಗಿದ್ದ ಅಖಿಲಾ ಭಾನು ಶವವನ್ನು ಸೈಯದ್ ಇರ್ಫಾನ್ ಪರಿಶೀಲನೆ ಮಾಡಿದಾಗ ಕುತ್ತಿಗೆಯ ಮೇಲೆ ತರಚಿದ ಗಾಯಗಳು ಕಂಡು ಬಂದಿದ್ದವು. ಇದರಿಂದ ಅನುಮಾನಗೊಂಡ ಸೈಯದ್ ಇರ್ಫಾನ್ ತಮ್ಮ ಚಿಕ್ಕಮ್ಮ ಸಾವು ಸಹಜವಲ್ಲ, ಕೊಲೆ ಎಂದು ದೂರು ನೀಡಿದ್ದರು. ಇದೀಗ ಕೊಲೆ ಪ್ರಕರಣ ಸಂಬಂಧಿಸಿದಂತೆ ಆರೋಪಿ ಪತಿ ಅಬ್ಬ ತಯ್ಯೂಬ್, ಆತನ ಮೊದಲನೇ ಹೆಂಡತಿಯ ಮಕ್ಕಳಾದ ಮುಹಮ್ಮದ್ ಆಸಿಫ್, ಮುಹಮ್ಮದ್ ತೌಸೀಪ್ ಹಾಗೂ ಮುಹಮ್ಮದ್ ಹೈದರ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

Share Information
Continue Reading
Advertisement
Click to comment

Leave a Reply

Your email address will not be published. Required fields are marked *