Connect with us

    LATEST NEWS

    ಸಿನೆಮಾ ರೀತಿಯಲ್ಲಿ ಹಾಡಹಗಲೇ ಮನೆಗೆ ನುಗ್ಗಿ ವೈದ್ಯೆಯ ಅಪಹರಣ…!!

    ಹೈದರಾಬಾದ್: ಸಿನೆಮಾದಲ್ಲಿ ಬರುವ ರೀತಿಯಲ್ಲಿ 50ಕ್ಕೂ ಅಧಿಕ ಮಂದಿ ಗೂಂಡಾಗಳು ಮನೆಯೊಂದಕ್ಕೆ ನುಗ್ಗಿ ಅಲ್ಲಿದ್ದ ವೈದ್ಯೆಯನ್ನು ಕಿಡ್ನ್ಯಾಪ್ ಮಾಡಿದ ಘಟನೆ ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


    ಕಾಣೆಯಾದ ವೈದ್ಯೆಯನ್ನು ವೈಶಾಲಿ (24) ಎಂದು ಗುರುತಿಸಲಾಗಿದೆ. ವೈದ್ಯೆ ವೈಶಾಲಿ ಮನೆಗೆ ನುಗ್ಗಿದ್ದ ಗೂಂಡಾಗಳು ಮನೆಯನ್ನು ಧ್ವಂಸಗೊಳಿಸಿದ್ದಾರೆ. ಅದಾದ ಬಳಿಕ ಮನೆಯಲ್ಲಿದ್ದ ಆಕೆಯ ತಂದೆ ಹಾಗೂ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ. ಅದಾದ ನಂತರ ಬಲವಂತವಾಗಿ ವೈಶಾಲಿಯನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾರೆ. ವೈಶಾಲಿಯ ಒಪ್ಪಿಗೆಯಿಲ್ಲದೇ ಅವಳನ್ನು ಎಳೆದುಕೊಂಡು ಕಾರಿನಲ್ಲಿ ಕೂರಿಸಿದರು ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದರು.

    ಘಟನೆಗೆ ಸಂಬಂಧಿಸಿ ರಾಚಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳ ಬಂಧನಕ್ಕೆ ತಂಡಗಳನ್ನು ರಚಿಸಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಆ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply