LATEST NEWS
44 ದಿನಕ್ಕೆ ರಾಜೀನಾಮೆ ನೀಡಿದ ಬ್ರಿಟನ್ ಪ್ರಧಾನಿ….!!

ಲಂಡನ್ ಅಕ್ಟೋಬರ್ 20: ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ 44 ದಿನಕ್ಕೆ ಬ್ರಿಟನ್‌ನ ನೂತನ ಪ್ರಧಾನಿ ಲಿಜ್ ಟ್ರಸ್ ಅವರು ರಾಜೀನಾಮೆ ನೀಡಿದ್ದಾರೆ.
ಆರ್ಥಿಕ ಪರಿಸ್ಥಿತಿ ನಿರ್ವಹಣೆಯಲ್ಲಿ ವಿಫಲರಾಗಿದ್ದರಿಂದ ರಾಜಿನಾಮೆ ನೀಡಿದ್ದಾಗಿ ಲಿಜ್ ಟ್ರಸ್ ಹೇಳಿದ್ದಾರೆ. ಬ್ರಿಟನ್‌ನಲ್ಲಿ ಮತ್ತೊಮ್ಮೆ ಚುನಾವಣೆ ನಡೆಯಲಿದೆ. ಮಾಜಿ ಹಣಕಾಸು ಸಚಿವ ಭಾರತೀಯ ಮೂಲದ ರಿಷಿ ಸುನಕ್ ಪ್ರಧಾನಿ ರೇಸ್ ನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಬ್ರಿಟನ್‌ನಲ್ಲಿ ಉಂಟಾಗಿರುವ ತೀವ್ರ ಆರ್ಥಿಕ ಕುಸಿತವನ್ನು ನಿಭಾಯಿಸಲು ಆಗದಿದ್ದಕ್ಕೆ ಕನ್ಸರ್ವೇಟಿವ್ ಪಕ್ಷದ ಟ್ರಸ್ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ಆರು ವಾರಗಳ ಹಿಂದೆ ರಿಷಿ ಸುನಕ್ ಅವರನ್ನು ಸೋಲಿಸಿ ಲಿಜ್ ಟ್ರಸ್ ಅವರು ಬ್ರಿಟನ್ ಪ್ರಧಾನ ಮಂತ್ರಿಯಾಗಿದ್ದರು. ನಾನು ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ಆಗುತ್ತಿಲ್ಲವಾದ್ದರಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಟ್ರಸ್ ಹೇಳಿದ್ದಾರೆ.
ಕಳೆದ ತಿಂಗಳು ಲಿಜ್ ಟ್ರಸ್ ಅವರು ಕನ್ಸರ್ವೇಟಿವ್ ಪಕ್ಷದ ನೂತನ ನಾಯಕಿಯಾಗಿ ಆಯ್ಕೆಯಾಗಿದ್ದರು. ಮಾರ್ಗರೇಟ್ ಥ್ಯಾಚರ್ ಮತ್ತು ಥೆರೆಸಾ ಮೇ ಅವರ ನಂತರ ದೇಶ ಮುನ್ನಡೆಸುವ ಮೂರನೇ ಮಹಿಳಾ ಪ್ರಧಾನಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು.