LATEST NEWS
ನಮ್ಮ ಹಣ ಉತ್ತರ ಭಾರತಕ್ಕೆ ಹಂಚಿಕೆ – ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಬೇಕಾಗುತ್ತದೆ – ಸಂಸದ ಡಿಕೆ ಸುರೇಶ್
ಬೆಂಗಳೂರು ಫೆಬ್ರವರಿ 1: ಕೇಂದ್ರ ಸರಕಾರ ಮದ್ಯಂತರ ಬಜೆಟ್ ಮಂಡನೆ ಮಾಡಿದ್ದು, ಕರ್ನಾಟಕದ ಕಾಂಗ್ರೇಸ್ ಸಂಸದ ಡಿಕೆ ಸುರೇಶ್ ಕೇಂದ್ರ ಸರಕಾರ ಬಜೆಟ್ ನಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ ಮಾಡಿದ್ದು,ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ ಕೂಗು ಎತ್ತಬೇಕಾಗುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇಂದು ಕೇಂದ್ರ ಬಜೆಟ್ ಕುರಿತು ವರದಿಗಾರರಿಗೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್ ಅವರು, ದಕ್ಷಿಣ ಭಾರತದ ತೆರಿಗೆ ಹಣವನ್ನು ಉತ್ತರ ಭಾರತಕ್ಕೆ ಹಂಚಿಕೆ ಮಾಡುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕವಾಗಿ ಅನ್ಯಾಯವಾಗುತ್ತಿದೆ ಎಂದರು.
ನಮ್ಮ ರಾಜ್ಯಗಳ ಹಣ ನಮಗೇ ಹಂಚಿಕೆಯಾಗಬೇಕಾದರೆ ಪ್ರತ್ಯೇಕ ರಾಷ್ಟ್ರದ ಕೂಗು ಅನಿವಾರ್ಯವಾಗಿದೆ. ಹೀಗಾಗಿ ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಬೇಕಾಗುತ್ತದೆ ಮತ್ತು ಮುಂದೆ ದಕ್ಷಿಣ ಭಾರತದ ರಾಜ್ಯಗಳು ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಲಿವೆ ಎಂದು ಕಾಂಗ್ರೆಸ್ ಸಂಸದ ಹೇಳಿದ್ದಾರೆ.
ಪ್ರತ್ಯೇಕ ರಾಷ್ಟ್ರದ ಕೂಗು ಏಳುವ ಮುನ್ನವೇ ಕೇಂದ್ರ ಸರ್ಕಾರ ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳಬೇಕು. ದಕ್ಷಿಣ ಭಾರತದ ತೆರಿಗೆ ಹಣವನ್ನು ದಕ್ಷಿಣ ಭಾರತಕ್ಕೇ ಖರ್ಚು ಮಾಡಬೇಕು. ನಮ್ಮ ಹಣವನ್ನು ಉತ್ತರ ಭಾರತಕ್ಕೆ ಹಂಚಿಕೆ ಮಾಡಬಾರದು ಎಂದು ಡಿ.ಕೆ.ಸುರೇಶ್ ಹೇಳಿದ್ದಾರೆ.