Connect with us

KARNATAKA

‘ಸಿಬಿಐಗಿಂತ ನನಗೆ ಲೋಕಾಯುಕ್ತದವರ ಹಿಂಸೆ ಹೆಚ್ಚಾಗಿದೆ’; ಡಿಕೆ ಶಿವಕುಮಾರ್ ಅಳಲು..!

ಬೆಂಗಳೂರು : ಸಿಬಿಐಗಿಂತ  ಲೋಕಾಯುಕ್ತದಿಂದ ನನಗೆ ಹಿಂಸೆ ಹೆಚ್ಚಾಗಿದ್ದು ಈ ಲೋಕಾಯುಕ್ತಕಿಂತ  ಸಿಬಿಐನವರೇ ಪರವಾಗಿಲ್ಲ ಎಂದು  ಡಿಸಿಎಂ ಡಿ ಕೆ ಶಿವಕುಮಾರ್  ಅಳಲು ತೋಡಿಕೊಂಡಿದ್ದಾರೆ.

ನನ್ನ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಅಂದಿನ ರಾಜ್ಯ ಸರ್ಕಾರ ಸಿಬಿಐನಿಂದ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿದ್ರೂ ಅತ್ತ ಸಿಬಿಐನವರು ತನಿಖೆ  ನಿಲ್ಲಿಸದೆ ಮುಂದುವರಿಸಿದ್ದಾರೆ. ನನ್ನ ಸ್ನೇಹಿತರು, ಕುಟುಂಬಸ್ಥರಿಗೆ  ಸಿಬಿಐ ತುಂಬಾ ಕಿರುಕುಳ ನೀಡುತ್ತಿದ್ದು ಇದೇ ಕೆಲಸವನ್ನು ಲೋಕಾಯುಕ್ತ ಕೂಡ ಮುಂದುವರಿಸಿದ್ದು  ಅವರಿಂದಲೂ ಕಿರುಕುಳ ಆಗುತ್ತಿದೆ ಎಂದು ದೂರಿದ್ದಾರೆ. ಕಳೆದ ಆರು ತಿಂಗಳಿನಿಂದ ಲೋಕಾಯುಕ್ತ ತನಿಖೆ ಮಾಡುತ್ತಿದ್ದು ಎರಡು ಗಂಟೆಗಳಿಗೂ ಹೆಚ್ಚು ಕಾಲ ನನ್ನನ್ನು ವಿಚಾರಣೆ ಮಾಡಿದ್ದಾರೆ. ಈ ಲೋಕಾಯುಕ್ತಕಿಂತ  ಸಿಬಿಐನವರೇ ಪರವಾಗಿಲ್ಲ. ಲೋಕಾಯುಕ್ತದವರು ಇಲ್ಲಸಲ್ಲದ ವಿಚಿತ್ರ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಸಿಬಿಐನವರೇ ಇನ್ನು ನನಗೆ ಪ್ರಶ್ನೆಗಳನ್ನೇ ಕೇಳಿಲ್ಲ  ಒಂದು ದಿನವೂ ವಿಚಾರಣೆಗೆ ಕರೆಯಲಿಲ್ಲ. ಆದರೆ ಲೋಕಾಯುಕ್ತದವರು ಈಗ ಹಿಂಸೆ ಕೊಡುತ್ತಿದ್ದಾರೆ ಎಂದು ದೂರಿದರು. ಲೋಕಾಯುಕ್ತದ ಎಲ್ಲಾ ಪ್ರಶ್ನೆಗಳಿಗೆ ಉತ್ತರಗಳನ್ನು ಕೊಟ್ಟಿದ್ದೇನೆ. ಒಂದಷ್ಟು ವಿಚಾರಗಳಲ್ಲಿ ಸ್ಪಷ್ಟನೆ ಪಡೆದುಕೊಳ್ಳಲು ಪ್ರಶ್ನೆಗಳನ್ನು ಕೇಳಿದ್ದು,ಇದಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಇರುವ ಪೂರಕವಾದ ದಾಖಲೆಗಳನ್ನು ಸಲ್ಲಿಸುತ್ತೇನೆ ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *