KARNATAKA
ರಾಮೇಶ್ವರಂ ಕೆಫೆ ಸ್ಫೋಟ ಪ್ರಮುಖ ಶಂಕಿತ ಆರೋಪಿ ಶಬ್ಬೀರ್ ಅರೆಸ್ಟ್
ಬೆಂಗಳೂರು ಮಾರ್ಚ್ 13: ಬೆಂಗಳೂರಿನ ಬ್ರೂಕ್‌ಫೀಲ್ಡ್ ಪ್ರದೇಶದಲ್ಲಿ ಒಂಬತ್ತು ಜನರನ್ನು ಗಾಯಗೊಳಿಸಿದ ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಶಂಕಿತ ಆರೋಪಿಯನ್ನು ಅರೆಸ್ಟ್ ಮಾಡಿದೆ. ಶಂಕಿತ ಆರೋಪಿಯನ್ನು ಶಬ್ಬೀರ್ ಎಂದು ಗುರುತಿಸಲಾಗಿದ್ದು, ಬಳ್ಳಾರಿ ಜಿಲ್ಲೆಯಿಂದ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ವರದಿ ಮಾಡಿದೆ. ಎನ್‌ಐಎ ಅಧಿಕಾರಿಗಳು ಶಂಕಿತನನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಶಬ್ಬೀರ್ ನನ್ನು ವಶಕ್ಕೆ ಪಡೆಯಲಾಗಿದ್ದು ಈತ ಬಳ್ಳಾರಿಯ ಟ್ಯಾಂಕ್ ಬಂಡ್ ರೋಡ್ ಗಲ್ಲಿ ನಿವಾಸಿಯಾಗಿದ್ದು, ತೋರಣಗಲ್ ನಲ್ಲಿ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದಾನೆ. ಈತ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ನಡೆಸಿದವನಿಗೆ ಕರೆ ಮಾಡಿರುವ ಶಂಕೆಯಿದೆ.
ಎನ್‌ಐಎ ವಶಕ್ಕೆ ಪಡೆದ ಶಬ್ಬೀರ್, ತೋರಣಗಲ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಮಾರ್ಚ್. 01ನೇ ತಾರೀಖು 9 ಗಂಟೆ 10 ನಿಮಿಷಕ್ಕೆ ಬುಡಾ ಕಾಂಪ್ಲೆಕ್ಸ್ ಬಳಿ ಶಂಕಿತ ಉಗ್ರನನ್ನ ಭೇಟಿಯಾಗಿದ್ದ. ಹಾಗೂ ಶಬ್ಬೀರ್, ಶಂಕಿತನನ್ನು ಫೋನ್ ಮೂಲಕ ಸಂಪರ್ಕ ಮಾಡಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಎಲ್ಲಾ ಅನುಮಾನದ ಮೇಲೆ ಎನ್‌ಐಎ ಅಧಿಕಾರಿಗಳು ಶಬ್ಬೀರ್ನನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.