Connect with us

  FILM

  ಗಂಡು ಮಗುವಿನ ತಾಯಿಯಾದ ಬಹುಭಾಷಾ ನಟಿ ಇಲಿಯಾನಾ…!!

  ಮುಂಬೈ ಅಗಸ್ಟ್ 06: ಬಾಲಿವುಡ್ ಬ್ಯೂಟಿ ಇಲಿಯಾನಾ ಗಂಡು ಮಗುವಿನ ತಾಯಿಯಾಗಿದ್ದಾರೆ. ಮುದ್ದಾದ ಮಗುವಿಗೆ ಹೆಸರನ್ನ ಕೂಡ ನಾಮಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.


  ಬಹುಭಾಷಾ ನಟಿ ಇಲಿಯಾನಾ ಗಂಡು ಮಗುವಿನ ತಾಯಿಯಾಗಿದ್ದಾರೆ. ತಾವು ಮಗುವಿನ ತಾಯಿಯಾಗುವ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ತಂದೆ ಯಾರು ಎನ್ನುವ ವಿಷಯ ಬಗ್ಗೆ ಚರ್ಚೆ ಯಾಗಿತ್ತು. ಆಗಸ್ಟ್ 1ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರವನ್ನ ತಡವಾಗಿ ರಿವೀಲ್ ಮಾಡಿದ್ದಾರೆ. ಕೋವಾ ಫೀನಕ್ಸ್ ಡೋಲನ್ (K0a phoenix Dolan) ಎಂದು ಮಗುವಿಗೆ ಹೆಸರಿಟ್ಟಿದ್ದಾರೆ. ಮಗುವಿನ ಜನನದ ವಿಚಾರ ಹೇಳ್ತಿದ್ದಂತೆ, ಮಗುವಿನ ತಂದೆ ಯಾರು ರಿವೀಲ್ ಮಾಡಿ ಎಂದು ಫ್ಯಾನ್ಸ್ ಬೇಡಿಕೆ ಇಟ್ಟಿದ್ದಾರೆ. ಪದಗಳಲ್ಲಿ ನಮ್ಮ ಸಂತಸವನ್ನು ಹೇಳಿಕೊಳ್ಳಲು ಆಗುತ್ತಿಲ್ಲ. ಈ ಪ್ರಪಂಚಕ್ಕೆ ನಮ್ಮ ಮಗುವಿನ ಆಗಮನವಾಗಿದೆ. ಅವನಿಗೆ ಸ್ವಾಗತ ಎಂದು ಸಂಭ್ರಮದಿಂದ ನಟಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply