BANTWAL
ಜೆಡಿಎಸ್ ಮುಖಂಡನ ಮನೆಯಲ್ಲಿ ಅನಧಿಕೃತ ಆಧಾರ್ ನೋಂದಣಿ ಕೇಂದ್ರ
ಜೆಡಿಎಸ್ ಮುಖಂಡನ ಮನೆಯಲ್ಲಿ ಅನಧಿಕೃತ ಆಧಾರ್ ನೋಂದಣಿ ಕೇಂದ್ರ
ಬಂಟ್ವಾಳ ಜುಲೈ 12: ಜೆಡಿಎಸ್ ಮುಖಂಡನ ಮನೆಯಲ್ಲಿ ನಕಲಿ ಆಧಾರ್ ಕಾರ್ಡ್ ನೊಂದಣಿ ಘಟಕಕ್ಕೆ ಬಂಟ್ವಾಳ ತಹಶಿಲ್ದಾರ್ ಪುರಂದರ ಹೆಗ್ಡೆ ನೇತ್ರತ್ವದಲ್ಲಿ ದಾಳಿ ನಡೆಸಿ ಆಧಾರ ನೋಂದಣಿ ಯಂತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಟ್ವಾಳದ ಕೆಳಗಿನ ಪೇಟೆಯಲ್ಲಿ ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾರೂನ್ ರಶೀದ್ ಅವರ ಮನೆಯಲ್ಲಿ ಅನಧಿಕೃತವಾಗಿ ಆಧಾರ್ ನೊಂದಣಿ ಕಾರ್ಯ ನಡೆಯುತ್ತಿರುವ ಕುರಿತು ಮಾಹಿತಿ ಮೆರೆಗೆ ಬಂಟ್ವಾಳ ತಹಶಿಲ್ದಾರ್ ಪುರಂದರ ಹೆಗ್ಡೆ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ಆಧಾರ್ ನೊಂದಣಿ ಯಂತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ನಕಲಿ ಆಧಾರ್ ಕಾರ್ಡ್ ನೊಂದಣಿಗೆ ಬಳಸುತ್ತಿದ್ದ ಲ್ಯಾಪ್‌ಟಾಪ್, ಬೆರಳಚ್ಚು ಯಂತ್ರ ವಶಕ್ಕೆ ಪಡೆಯಲಾಗಿದ್ದು, ಪ್ರಾನ್ಸಿಸ್ ಪ್ರಶಾಂತ್ ಮತ್ತು ಪ್ರಕಾಶ್ ವಶಕ್ಕೆ ಪಡೆದ ಆರೋಪಿಗಳು.
ಕಡಬ ಪಂಚಾಯಿತಿ ವ್ಯಾಪ್ತಿಯಲ್ಲಿ ಆಧಾರ್ ನೊಂದಣಿ ಮಾಡಲು ಅನುಮತಿ ಇರುವುದಾಗಿ ಆರೋಪಿಗಳು ತಿಳಿಸಿದ್ದರೂ ತಪಾಸಣೆ ವೇಳೆ ಯಾವುದೇ ದಾಖಲೆಗಳು ಲಭ್ಯವಾಗಿಲ್ಲ. ಆರೋಪಿ ವಿರುದ್ದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.