Connect with us

    LATEST NEWS

    ರೈಲಿನಲ್ಲಿ ಅಕ್ರಮ ಮದ್ಯ ಸಾಗಾಟ..138.750 ಲೀ. ಮದ್ಯ ವಶ

    ಮಂಗಳೂರು ಮೇ 28: ರೈಲಿನಲ್ಲಿ ಅಕ್ರಮವಾಗಿ ಮದ್ಯ ಸಾಗಾಟಕ್ಕೆ ಯತ್ನಿಸಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಅಬಕಾರಿ ಪೊಲೀಸರು ಯಶಸ್ವಿಯಾಗಿದ್ದು, ಬಂಧಿತರಿಂದ ಸುಮಾರು 138.750 ಲೀಟರ್ ಮದ್ಯ ವಶಪಡಿಸಿಕೊಂಡಿದೆ.


    ಮಂಗಳೂರಿನ ಕಂಕನಾಡಿಯಲ್ಲಿರುವ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ದಾದರ್‌ ತಿರುನಲ್ವೇಲಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಅಕ್ರಮವಾಗಿ ಮದ್ಯವನ್ನು ಸಾಗಾಟಕ್ಕೆ ಯತ್ನಿಸಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಬಕಾರಿ ಮತ್ತು ರೈಲ್ವೆ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮ ಸಾಗಾಟವನ್ನು ತಡೆದಿದ್ದು, ಮದ್ಯವನ್ನು ವಶ ಪಡಿಸಿಕೊಂಡಿದ್ದಾರೆ. ಆರೋಪಿಗಳಿಂದ ಸುಮಾರು 138.750 ಲೀಟರ್ ಮದ್ಯ ವಶಪಡಿಸಿಕೊಂಡಿದೆ. ಆದರೆ, ಆರೋಪಿಗಳು ನಾಪತ್ತೆಯಾಗಿದ್ದಾರೆ.


    ಈ ಸಂಬಂಧ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಬಕಾರಿ ಜಂಟಿ ಆಯುಕ್ತೆ‌ ಶೈಲಜ ಕೋಟೆ, ದಕ್ಷಿಣ ರೈಲ್ವೆ ಮಂಗಳೂರು ನಿರೀಕ್ಷ ಅಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply