DAKSHINA KANNADA
ಅಕ್ರಮ ಗೋ ಸಾಗಾಟ ಪ್ರಕರಣ ಬೇಧಿಸಿದ ವೇಣೂರು ಪೊಲೀಸರು- ಇಬ್ಬರ ಬಂಧನ..!

ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ದಕ್ಷಿಣ ಕನ್ನಡದ ವೇಣೂರು ಪೊಲೀಸರು ಪತ್ತೆ ಹಚ್ಚಿದ್ದು ಈ ಸಂಬಂಧ ಇಬ್ಬರ ಮೇಲೆ ಪ್ರಕರಣ ದಾಖಲು ಮಾಡಿದ್ದಾರೆ.
ಬೆಳ್ತಂಗಡಿ : ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ದಕ್ಷಿಣ ಕನ್ನಡದ ವೇಣೂರು ಪೊಲೀಸರು ಪತ್ತೆ ಹಚ್ಚಿದ್ದು ಈ ಸಂಬಂಧ ಇಬ್ಬರ ಮೇಲೆ ಪ್ರಕರಣ ದಾಖಲು ಮಾಡಿದ್ದಾರೆ.

ಕೇರಳದ ಇಡ್ಕಿ ಜಿಲ್ಲೆಯ ತೋಡುಪುಡ ತಾಲೂಕಿನ ಜಿನು ತೋಮಸ್ (34) ಮತ್ತು ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ರಂಜಿತ್ (31 ) ಬಂಧಿತ ಆರೋಪಿಗಳಾಗಿದ್ದಾರೆ.
ಯಾವುದೇ ಪರವಾನಿಗೆ ಇಲ್ಲದೆ ಗೋವಧೆ ನಡೆಸಿ ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜೀಪಿನಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿದ ವೇಣೂರು ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳು ಒಂದು ಗಂಡು ಕರು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಜೀಪನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಆರೋಪಿಗಳ ವಿರುದ್ದ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.