LATEST NEWS
ಕೇರಳದಿಂದ ಕರ್ನಾಟಕಕ್ಕೆ ಕಂಟೈನರ್ ನಲ್ಲಿ ಜಾನುವಾರು ಸಾಗಾಟ ಪತ್ತೆ ಹಚ್ಚಿದ ಪೊಲೀಸರು

ಮಂಗಳೂರು ಜೂನ್ 02: ಕೇರಳದಿಂದ ಕರ್ನಾಟಕಕ್ಕೆ ಕಂಟೈನರ್ ಲಾರಿಯಲ್ಲಿ ಅಕ್ರಮವಾಗಿ ಜಾನುವಾರುಗಳ ಸಾಗಾಟವನ್ನು ಮಂಗಳೂರು ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ಕೇರಳದಿಂದ ಕರ್ನಾಟಕ ರಾಜ್ಯದ ಕಡೆಗೆ ಜಾನುವಾರುಗಳನ್ನು ಕಂಟೈನರ್ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದ ಮೇರೆಗೆ ಮಂಗಳೂರು ಕಮೀಷನರೇಟ್ ವ್ಯಾಪ್ತಿ ಹಾದು ಹೋಗುವ ರಸ್ತೆಗಳಲ್ಲಿ ಹೆಚ್ಚು ಚೆಕ್ ಪೋಸ್ಟ್ಗಳನ್ನು ತೆರೆದು ವಾಹನಗಳ ಪರಿಶೀಲನೆ ನಡೆಸಲಾಗಿದೆ.

ದಿನಾಂಕ: 01-06-2025 ರಂದು ಬೆಳಗ್ಗಿನ ಜಾವ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಕಂಟೈನರ್ ವಾಹನವನ್ನು ತಲಪಾಡಿ ಟೋಲ್ ಗೇಟ್ ಬಳಿ ಪತ್ತೆ ಹಚ್ಚಿ ವಾಹನದಲ್ಲಿದ ಆರೋಪಿಯನ್ನು ಬಂಧಿಸಿ ಕಂಟೈನರ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ 24 ಜಾನುವಾರುಗಳನ್ನು ರಕ್ಷಿಸಲಾಗಿದೆ ಹಾಗೂ ನಾಗಾಟಕ್ಕೆ ಉಪಯೋಗಿಸಿದ ಕಂಟೈನರ್ ವಾಹನವನ್ನು ಸ್ವಾಧೀನಪಡಿಸಿಕೊಳ್ಳಲಾಗಿರುತ್ತದೆ.
ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಆ.ಕ್ರ 82/2025 ರಂತೆ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿರುತ್ತದೆ. ನದರಿ ರಕ್ಷಿಸಿರುವ 24 ಜಾನುವಾರುಗಳನ್ನು ಗೋಶಾಲೆಗೆ ಹಸ್ತಾಂತರಿಸಲಾಗಿದೆ.