LATEST NEWS
ಅಕ್ರಮವಾಗಿ ಜಾನುವಾರು ಸಾಗಾಟ.. ನಾಲ್ವರ ಬಂಧನ

ಕುಂದಾಪುರ ಸೆಪ್ಟೆಂಬರ್ 05: ಲಾರಿಯೊಂದರಲ್ಲಿ ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಕೋಣಗಳನ್ನು ಸಾಗಿಸುತ್ತಿದ್ದ ನಾಲ್ವರನ್ನು ಪೋಲಿಸರು ವಶಕ್ಕೆ ಪಡೆದು ಕೋಣಗಳನ್ನು ರಕ್ಷಿಸಿದ ಘಟನೆ ಹೊಸಂಗಡಿ ಚೆಕ್ ಪೋಸ್ಟ್ ನಲ್ಲಿ ನಡೆದಿದೆ.
ಹರಿಯಾಣ ಪಾತೆಬಾದ್ ಜಿಲ್ಲೆಯ ಮಂಜಿತ್ ಸಿಂಗ್ (38), ರಾಜಸ್ಥಾನದ ಪವಾನ್ ಕುಮಾರ್ (32), ಉತ್ತರ ಪ್ರದೇಶದ ಗುಲ್ವಾಂ(29) ಹರಿಯಾಣ ರವಿಕುಮಾರ್(25) ಬಂಧಿತ ಆರೋಪಿಗಳು.
ಶನಿವಾರ ಅಮಾಸೆಬೈಲು ಠಾಣೆ ಪಿಎಸ್ಐ ಹಾಗೂ ಸಿಬ್ಬಂದಿಗಳು ಹೊಸಂಗಡಿ ಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆ ಮಾಡುತ್ತಿರುವಾಗ ಬೆಳಿಗ್ಗೆ ಹುಲಿಕಲ್ ಘಾಟಿ ಕಡೆಯಿಂದ ಹೊಸಂಗಡಿ ಕಡೆಗೆ ಬಂದ ಲಾರಿಯನ್ನು ತಪಾಸಣೆ ಮಾಡಿದಾಗ ಲಾರಿಯಲ್ಲಿ ಅಕ್ರಮವಾಗಿ 30 ಕೋಣಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ಕೋಣಗಳಿಗೆ ಯಾವುದೇ ಮೇವು, ಆಹಾರ ನೀಡದೆ ಒಂದಕ್ಕೊಂದು ತಾಗಿಕೊಂಡು ಮಿಸುಕಾಡದಂತೆ ಹಿಂಸ್ಮಾತಕವಾಗಿ ಕಟ್ಟಿ ಹಾಕಿ ತುಂಬಲಾಗಿತ್ತು.

ಲಾರಿಯಲ್ಲಿದ್ದ ನಾಲ್ವರನ್ನು ವಿಚಾರಿಸಿದಾಗ ಕೋಣಗಳನ್ನು ಸಾಗಾಟ ಮಾಡಲು ಯಾವುದೇ ಪರವಾನಿಗೆ ಇಲ್ಲದಿರುವುದು ತಿಳಿದು ಬಂದಿದ್ದು,ಜಾನುವಾರುಗಳನ್ನು ವಧೆ ಮಾಡುವ ಉದ್ದೇಶದಿಂದ ಹಿಂಸ್ಮಾತಕವಾಗಿ ತುಂಬಿಸಿಕೊಂಡು ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ. ಅಮಾಸೆಬೈಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.