Connect with us

    BELTHANGADI

    ಚುನಾವಣಾ ತಪಾಸಣೆಯಲ್ಲಿದ್ದ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಅಕ್ರಮ ದನ ಸಾಗಾಟ

    ಬೆಳ್ತಂಗಡಿ ಮಾರ್ಚ್ 30: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದವರು ಚುನಾವಣೆ ಹಿನ್ನಲೆ ತಪಾಸಣೆಯಲ್ಲಿದ್ದ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಎಂಬಲ್ಲಿ ನಡೆದಿದೆ.


    ಆರೋಪಿಗಳು ಪಿಕಪ್ ವಾಹನದಲ್ಲಿ ನಾಲ್ಕು ದನಗಳನ್ನು ಅಕ್ರಮವಾಗಿ ಸಾಗಿಸುತ್ತಿರುವ ಮಾಹಿತಿಯನ್ನು ಹಿಂದೂ ಸಂಘಟನೆಗಳ ಮುಖಂಡರು ಅಧಿಕಾರಿಗಳಿಗೆ ನೀಡಿದ್ದರು. ಈ ಹಿನ್ನಲೆ ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.

    ಆರೋಪಿಗಳು ಸಿಕ್ಕಿಬೀಳುತ್ತಿದ್ದಂತೆ ಪರಾರಿಯಾಗಿದ್ದಾರೆ. ನಾಲ್ಕು ದನಗಳನ್ನು ರಕ್ಷಣೆ ಮಾಡಲಾಗಿದ್ದು, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply