DAKSHINA KANNADA
ಉಪ್ಪಿನಂಗಡಿ – ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ – ವಾಹನ ಚಾಲಕ ಜಯಂತ್ ಗೌಡ ಅರೆಸ್ಟ್

ಉಪ್ಪಿನಂಗಡಿ ಮೇ 05: ಮಿನಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಉರುವಾಲು ಗ್ರಾಮದ ಕುಪ್ಪೆಟ್ಟಿಯಲ್ಲಿ ಮಿನಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಂದು ದನ, ಮೂರು ಕರುಗಳು ಸೇರಿ ನಾಲ್ಕು ಜಾನುವಾರುಗಳನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ವಾಹನ ಚಾಲಕ ಜಯಂತ ಗೌಡನನ್ನು ಪೊಲೀಸರು ಬಂಧಿಸಿದ್ದಾರೆ.

ಬಂದಿತ ಜಯಂತ ಗೌಡ ಕುಪ್ಪೆಟ್ಟಿಯ ಬದ್ರುದ್ದೀನ್ ಯಾನೆ ಬದ್ರು ಎಂಬಾತನಿಗೆ ಗೋ ಸಾಗಾಟಕ್ಕೆ ಸಹಕರಿಸಿದ್ದು, ತನ್ನ ಎಳೆಯ ವಯಸ್ಸಿನ ಮಗುವನ್ನು ವಾಹನದಲ್ಲಿ ಕುಳ್ಳಿರಿಸಿ ಜಾನುವಾರುಗಳನ್ನು ತುಂಬಿದ ವಾಹನವನ್ನು ಚಲಾಯಿಸುತ್ತಿದ್ದ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಮೂವರ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.