LATEST NEWS
ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಬಜರಂಗದಳ ಕಾರ್ಯಕರ್ತ
ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಬಜರಂಗದಳ ಕಾರ್ಯಕರ್ತ
ಮಂಗಳೂರು ಜುಲೈ 27: ಅಕ್ರಮವಾಗಿ ಜಾನುವಾರಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಒಬ್ಬರು ಬಜರಂಗದಳದ ಕಾರ್ಯಕರ್ತ ಎಂದು ಹೇಳಲಾಗಿದೆ.
ನಿನ್ನೆ ತಡರಾತ್ರಿ ವಿಟ್ಲ ಠಾಣೆಯ ಪೊಲೀಸರು ವಿಟ್ಲ ಪಡ್ನೂರು ಗ್ರಾಮದ ಕಡಂಬು ಜಂಕ್ಷನ್ ಎಂಬಲ್ಲಿ ವಾಹನ ಒಂದನ್ನು ತಡೆದು ಪರಿಶೀಲನೆ ನಡೆಸಿದಾಗ ಈ ಅಕ್ರಮ ಜಾನುವಾರು ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ.
ಬಂಧಿತರನ್ನು ಬಂಟ್ವಾಳದ ಪಡ್ನೂರು ಗ್ರಾಮದ ಶಶಿ ಕುಮಾರ್ (48) ಮತ್ತು ಅಬ್ದುಲ್ ಹಾರಿಸ್ (21) ಎಂದು ಗುರುತಿಸಲಾಗಿದೆ. ಜಾನುವಾರು ಸಾಗಾಟಕ್ಕೆ ಬಳಸಿದ ವಾಹನ ಹಾಗು ಅದರಲ್ಲಿದ್ದ 4 ದನ ಹಾಗು ಒಂದು ಕರುವನ್ನು ಪೊಲೀಸರು ವಶಕ್ಕೆ ಪಡೆದಿದ್ದ್ದಾರೆ.
ಬಂಧಿತರಲ್ಲಿ ಒಬ್ಬನಾದ ಶಶಿಕುಮಾರ್ ಭಜರಂಗದಳದ ಕಾರ್ಯಕರ್ತ ಎಂದು ಹೇಳಲಾಗಿದೆ. ಮತ್ತೊಬ್ಬ ಆರೋಪಿ ಅಬ್ದುಲ್ ಹಾರಿಸ್ ಈ ಹಿಂದೆ ಅಳಿಕೆ ಎಂಬಲ್ಲಿ ನಡೆದ ದನ ಕಳವು ಪ್ರಕರಣದಲ್ಲಿ ಕೂಡ ಭಾಗಿಯಾಗಿದ್ದ ಎಂದು ಹೇಳಲಾಗಿದೆ.
You must be logged in to post a comment Login