Connect with us

    LATEST NEWS

    ಅಕ್ರಮ ಜಾನುವಾರು ಸಾಗಾಟಕ್ಕೆ ಯತ್ನ ಇಬ್ಬರ ಬಂಧನ

    ಮಂಗಳೂರು ಜುಲೈ 29: ತಲಪಾಡಿಯಿಂದ ಅಳೇಕಲ ಕಡೆಗೆ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪಿಕಪ್ ವಾಹನ ಚಾಲಕ ಅಬ್ದುಲ್ ಖಾದರ್ ಆಸಿಫ್ ಹಾಗೂ ಹನಿಫ್ ತಲಪಾಡಿ ಎಂದು ಗುರುತಿಸಲಾಗಿದೆ.


    ಆರೋಪಿಗಳು ಪಿಕಪ್ ವಾಹನದಲ್ಲಿ ಅಕ್ರಮವಾಗಿ 2 ಎತ್ತು ಮತ್ತು 2 ಕೋಣಗಳನ್ನು ಅಕ್ರಮವಾಗಿ ಸಾಗಿಸಲು ಪ್ರಯತ್ನಿಸಿದ್ದಾರೆ, ಅಕ್ರಮವಾಗಿ ಜಾನುವಾರುಗಳನ್ನು ತಲಪಾಡಿಯಿಂಜ ಅಳೇಕಲ ಕಡೆಗೆ ಕೊಂಡೊಯ್ಯುತ್ತಿದ್ದ ಸಂದರ್ಭ ಉಳ್ಳಾಲ ತೊಕ್ಕೊಟ್ಟು ಓವರ್ ಬ್ರಿಡ್ಜ್ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತ ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ ಚೆಕ್ ಪೋಸ್ಟ್ ನಲ್ಲಿ ಪೊಲೀಸ್ ಸಿಬ್ಬಂದಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಬೆಳಕಿಗೆ ಬಂದಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ವಾಹನವನ್ನು ಸೀಜ್ ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply