Connect with us

KARNATAKA

HDK ನಿವಾಸಕ್ಕೆ ಅಕ್ರಮ ವಿದ್ಯುತ್‌- ಕುಮಾರ ಸ್ವಾಮಿಗೆ ತದಕಿದ ಕಾಂಗ್ರೆಸ್‌, FIR ದಾಖಲು..!

ಬೆಂಗಳೂರು : ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು ಎಂದು ಹೆಚ್‌ಡಿ ಕುಮಾರ ಸ್ವಾಮಿಯ ಕಾಂಗ್ರೆಸ್ ಕಾಲೆಳೆದಿದೆ.

ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು ʼಬರʼ ಎದುರಿಸುತ್ತಿದ್ದೀರಾ? ಅದೇನೋ ಪತ್ರಿಕಾಗೋಷ್ಠಿ ನಡೆಸಿ ʼಕರ್ನಾಟಕ ಕತ್ತಲಲ್ಲಿದೆ ಎನ್ನುತ್ತಾ ಬಡಬಡಿಸಿದ್ದಿರಲ್ಲವೇ, ಈಗ ಕದ್ದ ವಿದ್ಯುತ್ತಿನಲ್ಲಿ ನಿಮ್ಮ ಮನೆಗೆ ಬೆಳಕು ಮಾಡಿಕೊಂಡಿದ್ದೀರಿ. ನಿಮ್ಮ ಮನೆ ಹೀಗೆ ಜಗಮಗ ಹೊಳೆಯುತ್ತಿರುವಾಗ ಅದ್ಯಾವ ಬಾಯಲ್ಲಿ ಕರ್ನಾಟಕ ಕತ್ತಲಲ್ಲಿದೆ ಎನ್ನುವಿರಿ ಸ್ವಾಮಿ? ಮ್ಮದೇ ಶೈಲಿಯ ಪ್ರಶ್ನೆ ಕೇಳಬೇಕೆಂದರೆ, ರಾಜ್ಯ ಬರ ಎದುರಿಸುತ್ತಿರುವಾಗ ನಿಮ್ಮ ಮನೆ ಮಾತ್ರ ಜಗಮಗಿಸಬೇಕೆ? ರೈತರ ಪಾಲಿನ ವಿದ್ಯುತ್ ಕಳ್ಳತನ ಮಾಡಿ ಮೋಜು ಮಾಡಬೇಕೆ? ನಿಮ್ಮ ಮನೆಯ ದೀಪಾವಳಿಗೆ ರಾಜ್ಯದ ಜನರ ʼದಿವಾಳಿʼಯನ್ನು ಬಯಸುತ್ತಿದ್ದೀರಾ? ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು? ಎಂದು ಕಾಂಗ್ರೆಸ್ ಕುಮಾರಸ್ವಾಮಿಯನ್ನು ತದಕಿದೆ.

https://x.com/INCKarnataka/status/1724299863586963705?s=20

ವಿದ್ಯುತ್‌ ಕಳ್ಳತನ ಆರೋಪ – ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲು:
ಜೆ.ಪಿ.ನಗರದಲ್ಲಿರುವ ನಿವಾಸಕ್ಕೆ ದೀಪಾವಳಿ ಅಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ವಿದ್ಯುತ್ ಕಳವು ಪ್ರಕರಣದಲ್ಲಿ ಹೆಚ್‌ಡಿಕೆ ವಿರುದ್ಧ ಬೆಸ್ಕಾಂ ಜಾಗೃತದಳ ಪ್ರಕರಣ ದಾಖಲಿಸಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ವಿದ್ಯುತ್ ಕಲಾಂ 135 ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *