LATEST NEWS
ಕಾಸರಗೋಡಿನ ಮಂದಿ ಅಕ್ರಮ ಪ್ರವೇಶಕ್ಕೆ ಯತ್ನಿಸಿದಲ್ಲಿ ಕಠಿಣ ಕ್ರಮ – ಕೋಟ ಶ್ರೀನಿವಾಸ ಪೂಜಾರಿ
ಕಾಸರಗೋಡಿನ ಮಂದಿ ಅಕ್ರಮ ಪ್ರವೇಶಕ್ಕೆ ಯತ್ನಿಸಿದಲ್ಲಿ ಕಠಿಣ ಕ್ರಮ – ಕೋಟ ಶ್ರೀನಿವಾಸ ಪೂಜಾರಿ
ಮಂಗಳೂರು ಎಪ್ರಿಲ್ 13: ಸುಪ್ರೀಂ ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಕರ್ನಾಟಕ – ಕೇರಳ ಗಡಿಭಾಗದ ತಲಪಾಡಿಯಲ್ಲಿ ತುರ್ತು ಚಿಕಿತ್ಸೆಯ ರೋಗಿಗಳ ಮಂಗಳೂರು ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಆದರೆ, ಹೀಗೆ ಅಗತ್ಯ ಚಿಕಿತ್ಸೆಗೆ ಬರುವ ರೋಗಿಗಳಿಗೆ ಕೊರೊನಾ ಇರಬಾರದು ಎಂಬ ಶರತ್ತು ವಿಧಿಸಲಾಗಿದೆ.
ಕಾಸರಗೋಡು ಜಿಲ್ಲೆಯ ಕಡೆಯಿಂದ ಬರುವ ರೋಗಿಗಳನ್ನು ತಪಾಸಣೆಗೆ ಒಳಪಡಿಸಿ ಮಂಗಳೂರಿಗೆ ಬಿಡಲಾಗುತ್ತಿದೆ. ಇದಕ್ಕಾಗಿ ತಲಪಾಡಿ ಗಡಿಯಲ್ಲಿ ವೈದ್ಯರನ್ನು ಒಳಗೊಂಡ ತಂಡವನ್ನು ನೇಮಿಸಲಾಗಿದೆ.
ತುರ್ತು ಚಿಕಿತ್ಸೆಗಾಗಿ ಬರುವ ರೋಗಿಗಳನ್ನು ವೈದ್ಯರ ತಂಡ ತಪಾಸಣೆಗೆ ಒಳಪಡಿಸಿ, ಚಿಕಿತ್ಸೆ ಅಗತ್ಯವಿದ್ದರೆ ಮಂಗಳೂರಿನ ನಿರ್ದಿಷ್ಟ ಆಸ್ಪತ್ರೆಗೆ ಕಳಿಸಿಕೊಡುತ್ತಿದೆ. ಈ ವೇಳೆ, ಕಾಸರಗೋಡಿನ ಮಂದಿ ಯಾವುದೇ ರೀತಿಯಲ್ಲಿ ಅಕ್ರಮ ಪ್ರವೇಶಕ್ಕೆ ಯತ್ನಿಸಿದಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸಂಸದ ನಳಿನ್ ಕುಮಾರ್ ಮತ್ತು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಲಪಾಡಿ ಗೇಟ್ ಗೆ ತೆರಳಿ ವೈದ್ಯರ ತಂಡ ನೇಮಕ ಮತ್ತು ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ.