Connect with us

LATEST NEWS

ಅಕ್ರಮ ಮೀನುಗಾರಿಕೆ ಮೀನುಗಾರಿಕಾ ದೋಣಿಗಳ ವಶ

ಅಕ್ರಮ ಮೀನುಗಾರಿಕೆ ಮೀನುಗಾರಿಕಾ ದೋಣಿಗಳ ವಶ

ಮಂಗಳೂರು ಅಕ್ಟೋಬರ್ 3: ಆಳ ಸಮುದ್ರದಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ ಎರಡು ಮೀನುಗಾರಿಕಾ ದೋಣಿಗಳನ್ನು ಭಾರತೀಯ ತಟರಕ್ಷಣಾ ಪಡೆ ವಶಪಡಿಸಿಕೊಂಡಿದೆ. ಕೋಸ್ಟ್ ಗಾರ್ಡ್ ಶಿಪ್ ಸಿ 420 ಸಮುದ್ರದಲ್ಲಿ ಪಹರೆ ನಡೆಸುತ್ತಿದ್ದ ಸಂದರ್ಭದಲ್ಲಿ ಎರಡು ಮೀನುಗಾರಿಕಾ ದೋಣಿಗಳು ಅಕ್ರಮವಾಗಿ ಬುಲ್ ಟ್ರಾಲಿಂಗ್ ಮೀನುಗಾರಿಕೆ ನಡೆಸುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಹಡಗು , ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ 2 ಮೀನುಗಾರಿಕಾ ದೋಣಿಗಳನ್ನು ವಶಪಡಿಸಿಕೊಂಡಿದೆ.

ವಶಪಡಿಸಿಕೊಂಡ ಮೀನುಗಾರಿಕಾ ದೋಣಿಯಲ್ಲಿ ಮೀನುಗಾರಿಕೆಗೆ ಸಂಬಂಧಿಸಿದ ಅಧಿಕೃತ ದಾಖಲೆಗಳು ಇರಲಿಲ್ಲ. ಹಾಗು ಮೀನುಗಾರಿಕಾ ದೋಣಿಯಲ್ಲಿದ್ದವರಲ್ಲಿ ಸರಿಯಾದ ಗುರುತಿನ ಚೀಟಿಗಳು ಪತ್ತೆಯಾಗಿಲ್ಲ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಭಾರತೀಯ ತಟರಕ್ಷಣಾ ಪಡೆ 2 ಮೀನುಗಾರಿಕಾ ದೋಣಿಗಳನ್ನು ವಶಪಡಿಸಿಕೊಂಡು ಕಾರವಾರದ ಕರಾವಳಿ ಕಾವಲು ಪಡೆಯ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ .

Share Information
Continue Reading
Advertisement
Click to comment

Leave a Reply

Your email address will not be published. Required fields are marked *