DAKSHINA KANNADA
ಅಕ್ರಮ ಜೂಜಾಟ ಅಡ್ಡೆಗೆ ದಾಳಿ 12 ಮಂದಿ ಬಂಧನ

ಅಕ್ರಮ ಜೂಜಾಟ ಅಡ್ಡೆಗೆ ದಾಳಿ 12 ಮಂದಿ ಬಂಧನ
ಮಂಗಳೂರು ಅಕ್ಟೋಬರ್ 15: ಅಕ್ರಮ ಜೂಜಾಟ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 12 ಮಂದಿ ಯನ್ನು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರ ಹೊರವಲಯದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಿಲಕೋಡಿ ಎಂಬಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಅಕ್ರಮವಾಗಿ ಅಂದರ್ – ಬಾಹರ್ ಆಟವಾಡುತ್ತಿದ್ದ 12 ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮುಚ್ಚಿಲಕೋಡಿ ಎಂಬಲ್ಲಿ ಅಕ್ರಮವಾಗಿ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಸ್ಥಳಕ್ಕೆ ದಾಳಿ ಮಾಡಿ 12 ಜನರನ್ನು ಬಂಧಿಸಿದ್ದಾರೆ. ಬಂಧಿತರನ್ನು ಗಣೇಶ್(38), ತಿಲಕ್(28), ಪ್ರಸಾದ್38), ಜಯರಾಜ್(27), ಜಯರಾಜ್(26), ಲೋಕೇಶ್(32), ಕೇಶ(27), ಚಂದ್ರಹಾಸ ದಾಸ್(26), ನವೀನ್ ಕುಮಾರ್26), ರೋಹಿತ್ (27), ರಂಜಿತ್(29), ಶರತ್ ರಾಜ್,(25). ಬಂಧಿತರಿಂದ 22,485/- ಹಾಗೂ ಜೂಜಾಟಕ್ಕೆ ಉಪಯೋಗಿಸಿದ ಇಸ್ಪೀಟ್ ಕಾರ್ಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
