LATEST NEWS
ಅಕ್ರಮ ಮರಳುಗಾರಿಕೆಗೆ ಸಹಕಾರ – ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್ ಸಸ್ಪೆಂಡ್
ಉಡುಪಿ ನವೆಂಬರ್ 30: ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್ ಅವರನ್ನು ಉಡುಪಿ ಜಿಲ್ಲಾ ಎಸ್ಪಿ ಡಾ. ಅರುಣ್ ಕುಮಾರ್ ಅಮಾನತು ಮಾಡಿದ್ದಾರೆ.
ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಕ್ರಮ ಮರಳುಗಾರಿಕೆ ನಡೆಸಲು ಕಾಪು ಠಾಣಾಧಿಕಾರಿಯವರು ಸಹಕರಿಸಿದ್ದಾರೆ ಎಂಬುದನ್ನು ತಿಳಿಸುವ ಆಡಿಯೋವೊಂದು ಎಸ್ಪಿ ಡಾ.ಅರುಣ್ ಅವರಿಗೆ ಲಭಿಸಿದ್ದು, ಈ ಆಡಿಯೋವನ್ನು ಕಾರ್ಕಳ ಡಿವೈಎಸ್ಪಿ ಅರವಿಂದ್ ಕಲ್ಲುಗುಜ್ಜಿಯವರ ಮೂಲಕ ವಿಚಾರಣೆ ನಡೆಸಿದ್ದಾರೆ. ಡಿವೈಎಸ್ಪಿಯವರ ವರದಿಯಲ್ಲಿ ಕಾಪು ಠಾಣಾಧಿಕಾರಿ ವಿರುದ್ದದ ಆರೋಪವು ಮೇಲ್ನೋಟಕ್ಕೆ ಸಾಭೀತಾದ ಹಿನ್ನಲೆಯಲ್ಲಿ ಅಮಾನತುಗೊಳಿಸಲಾಗಿದೆ. ಈ ಬಗ್ಗೆ ಮಾತನಾಡಿದ ಅವರು, ಜಿಲ್ಲಾ ಎಸ್ಪಿ ಡಾ.ಅರುಣ್, ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆಯಲ್ಲಿ ಕಾನೂನು ಉಲ್ಲಂಘನೆಯಾಗಿದ್ದು, ಅಧಿಕಾರಿ ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.