ಕುಕ್ಕೆಯಲ್ಲಿ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ

ಸುಳ್ಯ ಜನವರಿ 23:ಜಿಲ್ಲೆಯ ಪ್ರಸಿದ್ಧ ಆದಿ ಸುಬ್ರಹ್ಮಣ್ಯ ದೇವಾಲಯದ ರಸ್ತೆ ಬದಿಯಲ್ಲಿನ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ನಡೆಯಿತು.

ಮಂಗಳೂರು ಎ.ಡಿ.ಸಿ ರೂಪ ಅವರ ಮುಂದಾಳತ್ವದಲ್ಲಿ ಕಟ್ಟಡ ತೆರವು ಕಾರ್ಯಾಚರಣೆ ನಡೆಯಿತು. ವ್ಯಾಪಾರಿಗಳು ಆದಿಸುಬ್ರಹ್ಮಣ್ಯದ ರಸ್ತೆಯ ಬದಿಯಲ್ಲಿ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತಿದ್ದರು. ಇದು ಇಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿತ್ತು.

ಈ ಕಾರಣಗಳಿಂದಾಗಿ ರಸ್ತೆಯ ಅಗಲೀಕರಣ ನಿಧಾನವಾಗಿ ಸಾಗುತ್ತಿತ್ತು ಎಂಬುದು ಸಾರ್ವಜನಿಕರ ಆರೋಪವಾಗಿತ್ತು. ಈ ಹಿನ್ನೆಲೆಯಲ್ಲಿ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಯಿತು.

ಕಟ್ಟಡ ಹಾಗೂ ಅಂಗಡಿಗಳ ತೆರವು ಕಾರ್ಯ ನಡೆಯುವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂಬ ಉದ್ದೇಶದಿಂದ, ಪೊಲೀಸ್ ಅಧಿಕಾರಿಗಳ ನಿಯೋಜನೆಯನ್ನು ಮಾಡಲಾಗಿತ್ತು,