Connect with us

DAKSHINA KANNADA

ಅಕ್ರಮ ಮರ ಸಾಗಾಟಕ್ಕೆ ಯತ್ನ – ಲಾರಿ ಬಿಟ್ಟು ಪರಾರಿಯಾದ ಆರೋಪಿಗಳು

ಉಪ್ಪಿನಂಗಡಿ: ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ಡಿಸೆಂಬರ್ 22 ರಂದು ಬೆಳಗ್ಗಿನ ಜಾವ ಕಾರ್ಯಾಚರಣೆ ನಡೆಸಿ ಅಕ್ರಮ ಮರ ಸಾಗಾಟ ಪ್ರಕರಣವೊಂದನ್ನು ಪತ್ತೆ ಹಚ್ಚಿ ಅಕ್ರಮ ಮರ ಸೇರಿದಂತೆ 10 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.


ಅಕ್ರಮ ಮರ ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ಉಪ್ಪಿನಂಗಡಿ ಗ್ರಾಮದ ಪೆರಿಯಡ್ಕ ಎಂಬಲ್ಲಿ ಮರ ಹಾಗೂ ಲಾರಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರ್ಯಾಚರಣೆ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ. ವಶಪಡಿಸಿಕೊಂಡ ಲಾರಿ ಹಾಗೂ ಮರದ ಒಟ್ಟು ಮೌಲ್ಯ ೧೦ ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ
ಕೆಲ ದಿನಗಳ ಹಿಂದೆ ಶಿರಾಡಿ ಗ್ರಾಮದ ಗುಂಡ್ಯದಲ್ಲಿ ಅಕ್ರಮ ಮರ ಸಾಗಾಟ ಪ್ರಕರಣವೊಂದನ್ನು ಪತ್ತೆ ಹಚ್ಚಿದ ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ಆರೋಪಿಯನ್ನು ಬಂಧಿಸಿ 8 ಲಕ್ಷ ರೂ.ಮೌಲ್ಯದ ಮರ ಹಾಗೂ ಲಾರಿ ವಶಪಡಿಸಿಕೊಂಡಿದ್ದರು.

Facebook Comments

comments