LATEST NEWS
ರೈತರಿಗೆ ಗುಡ್ ನ್ಯೂಸ್ ಕೊಟ್ಟ ಹವಾಮಾನ ಇಲಾಖೆ – ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚು ಮುಂಗಾರು ಮಳೆ

ನವದೆಹಲಿ ಎಪ್ರಿಲ್ 15: ಈ ಬಾರಿ ದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮುಂಗಾರು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಮಳೆಗಾಲದ ಋತುಮಾನದುದ್ದಕ್ಕೂ ಎಲ್ ನಿನೊ ಪರಿಣಾಮದ ಸಾಧ್ಯತೆಗಳು ಕಡಿಮೆ ಇದರಿಂದಾಗಿ ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ನಾಲ್ಕು ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಲಿದೆ. ದೀರ್ಘಾವಧಿಯ ಸರಾಸರಿ ಮಳೆಯ ಪ್ರಮಾಣ 87 ಸೆಂ.ಮೀ. ಇದ್ದು, ಈ ಬಾರಿ ಶೇ 105ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಇಲಾಖೆಯ ಮುಖ್ಯಸ್ಥ ಮೃತ್ಯುಂಜಯ ಮೋಹಪಾತ್ರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ದೇಶದ ಹಲವು ಭಾಗಗಳಲ್ಲಿ ಈಗಾಗಲೇ ಬಿಸಿಗಾಳಿ ಬೀಸುತ್ತಿದೆ. ಏಪ್ರಿಲ್‌ನಿಂದ ಜೂನ್‌ವರೆಗೆ ಬಿಸಿಗಾಳಿ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಇದರಿಂದಾಗಿ ವಿದ್ಯುತ್ ಉತ್ಪಾದನೆಗೆ ನೀರಿನ ಕೊರತೆ ಎದುರಾಗಬಹುದು ಎಂದು ಇಲಾಖೆ ಹೇಳಿದೆ.