Connect with us

    LATEST NEWS

    ದೇಶದ ಇತಿಹಾಸದಲ್ಲೇ ಅತಿ ದೊಡ್ಡ ಕಾರ್ಯಾಚರಣೆ….25 ಸಾವಿರ ಕೋಟಿ ಮೌಲ್ಯದ ಡ್ರಗ್ ವಶಕ್ಕೆ…..!!

    ತಿರುವನಂತಪುರಂ ಮೇ 16 : ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಮಾದಕವಸ್ತು ನಿಗ್ರಹ ದಳ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಳ್ಳುವುದು ಅಪರೂಪ ಪ್ರಕರಣಗಳು ನಡೆಯುತ್ತಿದ್ದವು, ಆದರೆ ಇಡೀ ದೇಶವೆ ಬೆಚ್ಚಿಬಿಳಿಸುವ ಘಟನೆ ಕೇರಳದಲ್ಲಿ ನಡೆದಿದ್ದು, ಕೊಚ್ಚಿ ಬಂದರಿನಲ್ಲಿ ಬರೋಬ್ಬರಿ 25 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ಮಾದಕ ವಸ್ತು ನಿಗ್ರಹ ದಳ ಹಾಗೂ ಭಾರತೀಯ ನೌಕಾಪಡೆ ಶನಿವಾರ ಕೇರಳದ ಕೊಚ್ಚಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಬಂದರಿಗೆ ಆಗಮಿಸಿದ ನೌಕೆಯಿಂದ 134 ಚೀಲಗಳಲ್ಲಿ ತುಂಬಿದ್ದ ಮಾದಕ ವಸ್ತು ಪತ್ತೆ ಮಾಡಿತ್ತು. ಈ ಮಾದಕ ವಸ್ತುವಿನ ಮೌಲ್ಯ ಬರೋಬ್ಬರಿ 25,000 ಕೋಟಿ ರೂ. ಎಂದು ಎನ್‌ಸಿಬಿ ತಿಳಿಸಿದೆ.


    ಎನ್‌ಸಿಬಿ ಹಾಗೂ ನೌಕಾಪಡೆ ವಶಪಡಿಸಿಕೊಂಡ ಹೈ ಪ್ಯೂರಿಟಿ ಮೆಥಾಂಪೆಟಮೈನ್‌ನ ಎಣಿಕೆ ಪೂರ್ಣಗೊಂಡಿದೆ. ಒಟ್ಟು 2,525 ಕೆಜಿ ತೂಕದ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದು, ಇದರ ಬೆಲೆಯನ್ನು ಆರಂಭದಲ್ಲಿ 12,000 ಕೋಟಿ ರೂ. ಎಂದು ಅಂದಾಜಿಸಲಾಗಿತ್ತು. ಆದರೆ ಡ್ರಗ್ಸ್ನ ಗುಣಮಟ್ಟ ಪರಿಶೀಲನೆ ಬಳಿಕ ಇದರ ಬೆಲೆ 25,000 ಕೋಟಿ ರೂ. ನಷ್ಟಿದೆ ಎಂದು ಅಂದಾಜಿಸಲಾಗಿದೆ. ಮಾತ್ರವಲ್ಲದೇ ಇದು ದೇಶದಲ್ಲಿಯೇ ವಶಪಡಿಸಿಕೊಳ್ಳಲಾದ ಅತಿ ದೊಡ್ಡ ಮಾದಕ ವಸ್ತು ಪ್ರಕರಣವಾಗಿ ಹೊರಹೊಮ್ಮಿದೆ.

    ಮೂಲಗಳ ಪ್ರಕಾರ ಉತ್ಕೃಷ್ಟ ಗುಣಮಟ್ಟದ ಡ್ರಗ್ಸ್ ಅನ್ನು ಭಾರತ, ಶ್ರೀಲಂಕಾ ಹಾಗೂ ಮಾಲ್ಡೀವ್ಸ್‌ಗೆ ಸಾಗಿಸಲೆಂದು ಹಡಗಿನಲ್ಲಿ ತರಲಾಗಿತ್ತು. ತನಿಖೆ ವೇಳೆ ಅಫ್ಘಾನಿಸ್ತಾನದಲ್ಲಿ ಉತ್ಪಾದಿಸಲಾಗಿದ್ದ ಡ್ರಗ್ಸ್ ಅನ್ನು ಪಾಕಿಸ್ತಾನ-ಇರಾನ್ ಸನಿಹದ ಮಕ್ರಾಮ್ ಕರಾವಳಿಯಿಂದ ಮದರ್ ಶಿಪ್ ಎಂಬ ಹಡಗಿನಲ್ಲಿ ತರಲಾಗುತ್ತಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಒಬ್ಬ ಶಂಕಿತ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಲಾಗಿದೆ

    Share Information
    Advertisement
    Click to comment

    Leave a Reply

    Your email address will not be published. Required fields are marked *