ಇಂದೋರ್ ಅಕ್ಟೋಬರ್ 30: ಮನೆಮುಂದೆ ರಂಗೋಲಿ ಇಡುತ್ತಿದ್ದ ಇಬ್ಬರು ಯುವತಿರ ಮೇಲೆ ಕಾರೊಂದು ಹರಿದ ಪರಿಣಾಮ ಇಬ್ಬರು ಬಾಲಕಿಯರು ಗಂಭೀರವಾಗಿ ಗಾಯಗೊಂಡ ಘಟನೆ ಮಧ್ಯಪ್ರದೇಶದ ಇಂದೋರ್‌ನ ಜೈಭವಾನಿ ನಗರದಲ್ಲಿ ನಡೆದಿದೆ.


ಕಿರಿದಾದ ರಸ್ತೆಯಲ್ಲಿ ಕಾರು ಚಾಲಕ ವೇಗವಾಗಿ ಕಾರು ಚಲಾಯಿಸಿದ್ದಾನೆ. ಈ ವೇಳೆ ಕಾರು ನಿಯಂತ್ರಣ ತಪ್ಪಿದ್ದು, ನೋಡ ನೋಡುತ್ತಲೇ ರಸ್ತೆ ಪಕ್ಕ ಮನೆ ಮುಂದೆ ರಂಗೋಲಿ ಹಾಕುತ್ತಿದ್ದ ಇಬ್ಬರು ಬಾಲಕಿಯರಿಗೆ ಢಿಕ್ಕಿಯಾಗಿದೆ. ಈ ಅಪಘಾತದಲ್ಲಿ 19 ವರ್ಷದ ಯುವತಿ ಹಾಗೂ 13 ವರ್ಷದ ಅಪ್ರಾಪ್ತ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರಿನಡಿ ಸಿಲುಕಿದ್ದ ಇಬ್ಬರು ಬಾಲಕಿಯರನ್ನು ಸ್ಥಳೀಯರು ಹೊರಗೆಳೆದಿದ್ದು, ಬಳಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕಾರು ಮಾಲೀಕನ ಹೆಸರು ತುಷಾರ್ ಅಗರ್ವಾಲ್ ಎಂದು ಆತ ಹುಕುಂಚಂದ್ ಕಾಲೋನಿ ನಿವಾಸಿ ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಆತ ಸ್ಥಳದಿಂದ ಪರಾರಿಯಾಗಿದ್ದ. ಆದರೆ ಪೊಲೀಸರು ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.

 

Share Information