ಮಣಿಪುರ ಜುಲೈ 20: ಕಳೆದ ಮೂರು ನಾಲ್ಕು ತಿಂಗಳಿನಿಂದ ಹಿಂಸಾಚಾರ ಪೀಡಿವಾಗಿದ್ದ ಮಣಿಪುರದ ಸ್ಥಿತಿಯ ಕುರಿತ ಒಂದು ವಿಡಿಯೋ ಇದೀಗ ವೈರಲ್ ಆಗಿದ್ದು, ಸರಕಾರಗಳ ಮೌನಕ್ಕೆ ಜನಾಂಗೀಯ ಹಿಂಸಾಚಾರಕ್ಕೆ ಒಳಗಾಗಿರುವ ಮಣಿಪುರದಲ್ಲಿ, ಅಮಾನುಷ ಕೃತ್ಯಗಳು ನಡೆದು ಹೋಗಿವೆ. ಇದೀಗ ಮೇ 4 ರಂದು ನಡೆದಿದೆ ಎನ್ನಲಾಗಿರುವ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ.

ವೈರಲ್ ಆಗಿರುವ ವೀಡಿಯೋದಲ್ಲಿ ಮೈತೇಯ್ ಸಮುದಾಯದ ಪುರುಷರ ಗುಂಪೊಂದು ಕುಕಿ ಜನಾಂಗಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಸಾಮೂಹಿಕ ಅತ್ಯಾಚಾರ ಮಾಡಲು ಭತ್ತದ ಗದ್ದೆಗೆ ಎಳೆದುಕೊಂಡು ಹೋಗುವುದನ್ನು ತೋರಿಸುತ್ತದೆ. ಪುರುಷರ ಗುಂಪು ಮಹಿಳೆಯರನ್ನು ಬೆತ್ತಲಾಗಿಸಿ, ರಸ್ತೆಯಲ್ಲಿ ಮೆರವಣಿಗೆ ಮಾಡಿದ್ದಲ್ಲದೇ ಅವರಿಗೆ ಕಿರುಕುಳ ನೀಡಿದ್ದಾರೆ. ಮಹಿಳೆಯರು ಅಸಹಾಯಕತೆಯಿಂದ ಅಳುತ್ತ ತಮ್ಮನ್ನು ಬಿಡುವಂತೆ ಮನವಿ ಮಾಡಿರುವುದೂ ವೀಡಿಯೋದಲ್ಲಿ ಕಂಡುಬಂದಿದೆ.
ಇದೇ ವರ್ಷ ಮೇ 4ರಂದು ನಡೆದಿರುವ, ಇಬ್ಬರು ಮಹಿಳೆಯರ ಬೆತ್ತೆಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಮಣಿಪುರದ ನೊಂಗ್ ಪೊಕ್ ಸೆಕ್ಮಯ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣಗಳು ದಾಖಲಾಗಿದ್ದು, ಅಪರಿಚಿತ ವ್ಯಕ್ತಿಗಳನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ಪ್ರಕರಣದ ತನಿಖೆ ಆರಂಭಿಸಲಾಗಿದ್ದು, ಆರೋಪಿಗಳನ್ನು ಬಂಧಿಸಲು ಮಣಿಪುರ ಪೊಲೀಸ್ ಎಲ್ಲಾ ರೀತಿಯ ಕ್ರಮಗಳನ್ನ ಕೈಗೊಳ್ಳಲಿದೆ ಎಂದು ಎಂದು ಟ್ವೀಟ್ ನಲ್ಲಿ ತಿಳಿಸಲಾಗಿದೆ.