Connect with us

    LATEST NEWS

    ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರು, ವಿದ್ಯಾರ್ಥಿನಿಯರಿಗೆ ಹಿಜಾಬ್ ಕಡ್ಡಾಯ!

    ಶ್ರೀ ನಗರ, ಮಾರ್ಚ್ 08: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಶಿಕ್ಷಣ ಸಂಸ್ಥೆಗಳಲ್ಲಿ ಮಹಿಳಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಹಿಜಾಬ್ ಕಡ್ಡಾಯಗೊಳಿಸಲಾಗಿದೆ.

    ಸ್ಥಳೀಯ ಆಡಳಿತದ ಅಧಿಸೂಚನೆಯ ಪ್ರಕಾರ, ಶಿಕ್ಷಣ ಸಂಸ್ಥೆಗಳಲ್ಲಿ ಇರುವ ಮಹಿಳಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಿಜಾಬ್ ಧರಿಸುವುದು ಕಡ್ಡಾಯವಾಗಿದೆ.

    ಆದೇಶ ಉಲ್ಲಂಘಿಸಿದರೆ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಸ್ಥಳೀಯ ಪತ್ರಕರ್ತೆಯೊಬ್ಬರು ಈ ಬಗ್ಗೆ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ. ಮಹಿಳೆಯರಿಗೆ ಅವರು ಧರಿಸುವುದನ್ನು ಆಯ್ಕೆ ಮಾಡುವ ಸ್ವಾತಂತ್ರ್ಯ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply